ವಿಜಯಪುರ: ಮುಂಬರುವ ವಿಜಯಪುರ ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ಆಮ್ ಆದ್ಮಿ ಪಾರ್ಟಿಯ ಉಮೇದುವಾರರು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರೋಹನ್ ಐನಾಪುರ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ಈಗಾಗಲೇ ಪ್ರತಿ ವಾರ್ಡ್ಗಳಿಗೆ ಭೇಟಿ ನೀಡಿ ಆಸಕ್ತರೊಂದಿಗೆ ಚರ್ಚಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲ 35 ವಾರ್ಡ್ಗಳಿಗೆ ಪಕ್ಷದ ಉಮೇದುವಾರರು ಸ್ಪರ್ಧಿಸಲಿದ್ದಾರೆ ಎಂದರು.

ಎಂಟು ವಾರ್ಡ್ಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಿದರು.

ಪಕ್ಷದ ಹಿತ ಚಿಂತಕರು, ದಾನಿಗಳು, ಸಮರ್ಥಕರು, ಕಾರ್ಯಕರ್ತರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾಗವಹಿಸಲು 9706145145ಮೊಬೈಲ್ ನಂಬರ್ಗೆ ಮಿಸ್ ಕಾಲ್ ನೀಡುವ ಮೂಲಕ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಛಿಸುವವರು 7669400410 ಮೊಬೈಲ್ ನಂಬರ್ಗೆ ಮಿಸ್ ಕಾಲ್ ಮಾಡುವ ಮೂಲಕ ಪಕ್ಷವನ್ನು ಸಂಪರ್ಕಿಸಬೇಕು ಎಂದು ಹೇಳಿದರು.

ಶಿಕ್ಷಣ, ಆರೋಗ್ಯ, ವಿದ್ಯುತ್, ನೀರು ಸೇರಿದಂತೆ ಮೂಲಸೌಲಭ್ಯಗಳನ್ನು ಜನರಿಗೆ ಉಚಿತವಾಗಿ ಒದಗಿಸುವುದು ಪಕ್ಷದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಪಕ್ಷದ ಮುಖಂಡರಾದ ಅಬ್ದುಲ್ ಹಮೀದ್ ಶೇಖ್, ನಿಹಾದ್ ಅಹ್ಮದ್ ಗೋಡಿಯಾಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.