ನಿಡಗುಂದಿ: ‘ತೊಗರಿ, ಮೆಕ್ಕೆಜೋಳ, ಈರುಳ್ಳಿ ಮತ್ತಿತರ ಬೆಳೆಗಳಿಗೆ ಯೂರಿಯಾ ಗೊಬ್ಬರ ನೀಡಬೇಕು. ಇಲ್ಲದಿದ್ದರೆ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗುವ ಆತಂಕವಿದೆ. ಕೂಡಲೆ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಜಿಲ್ಲಾ ಅಧ್ಯಕ್ಷ ನಿಂಗರಾಜ ಆಲೂರ ಮಾತನಾಡಿ, ‘ರೈತರು ಯೂರಿಯಾ ಗೊಬ್ಬರಕ್ಕಾಗಿ ನಿತ್ಯ ಅಲೆದಾಡುತ್ತಿದ್ದರೂ ಗೊಬ್ಬರ ಸಿಗುತ್ತಿಲ್ಲ. ಗುರಿಗಿಂತ ಹೆಚ್ಚು ಬಿತ್ತನೆ ಆಗಿದ್ದು, ಅದಕ್ಕೆ ತಕ್ಕಂತೆ ಗೊಬ್ಬರ ವಿತರಿಸುವಲ್ಲಿ ಕೃಷಿ ಸಚಿವರು ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.

ಗ್ರೇಡ್-2 ತಹಶೀಲ್ದಾರ್ ಎಸ್.ಎಸ್.ಭಾವಿಕಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮುಖಂಡರಾದ ಮಹಾಂತಪ್ಪ ವಾಲೀಕಾರ, ಶಶಿಕಾಂತ ದೇಸಾಯಿ, ಸಂಜೀವ ಚನಗೊಂಡ, ರಾಮಣ್ಣ ಸೀತಿಮನಿ, ಲಕ್ಷ್ಮಣಗೌಡ ಬಿರಾದಾರ, ಶಿವಪ್ಪ ಪಾಟೀಲ, ಶೇಖಪ್ಪ ಕೋಳೂರ, ಶಿವಪ್ಪ ಹೆಬ್ಬಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.