ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂದಗಿ | 'ಶಾಲಾ ಮಕ್ಕಳಿಂದ ಜಾಗೃತಿ ಜಾಥಾ'

Published 6 ಜೂನ್ 2024, 5:52 IST
Last Updated 6 ಜೂನ್ 2024, 5:52 IST
ಅಕ್ಷರ ಗಾತ್ರ

ಸಿಂದಗಿ: ಪಟ್ಟಣದ ಹೊರವಲಯ ವಿದ್ಯಾಗಿರಿಯ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ನ(ಸಿಬಿಎಸ್ಇ) ವಿದ್ಯಾರ್ಥಿಗಳು ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಜೇರಟಗಿ ಗ್ರಾಮದಲ್ಲಿ ಶುಕ್ರವಾರ ಬೀದಿ ನಾಟಕ ಪ್ರದರ್ಶಿಸಿ ಜಾಗೃತಿ ಮೂಡಿಸಿದರು.

10ನೇ ತರಗತಿಯ ವಿದ್ಯಾರ್ಥಿಗಳು ಅಭಿನಯಿಸಿದ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಕುರಿತಾದ ಬೀದಿ ನಾಟಕ ಸಾರ್ವಜನಿಕರ ಗಮನ ಸೆಳೆಯಿತು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಾದ ಜಾನ್ವಿ, ಸೌಮ್ಯ, ಖಾಜಿಯಾ, ಅನುಶ್ರೀ ಅವರು ಅವರು ತಂಬಾಕು, ಸಿಗರೇಟ್ ಸೇವನೆಯಿಂದ ಆರೋಗ್ಯದ ಮೇಲಾಗುವ ಕೆಟ್ಟ ಪರಿಣಾಮ ಕುರಿತು ಭಾಷಣ ಮಾಡಿದರು.

ತಂಬಾಕು ವಿರೋಧಿ ಘೋಷಣೆಗಳ ಫಲಕಗಳನ್ನು ಪ್ರದರ್ಶಿಸಿದರು.

ಪ್ರಾಚಾರ್ಯೆ ಶಾಲಿನಿ, ಶಿಕ್ಷಕರಾದ ಅಥಾವುಲ್ಲಾ, ಸಂತೋಷ, ಚಿದಾನಂದ, ಪದ್ಮಾ, ಅನುಷಾ ಹಾಗೂ ಅತ್ಯಧಿಕ ಸಂಖ್ಯೆಯಲ್ಲಿ ಶಾಲಾ ಮಕ್ಕಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಭೂ ಮಾಫಿಯಾ ಮಟ್ಟಹಾಕಲು ಒತ್ತಾಯ ವಿಜಯಪುರ: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿಸಿ ಭೂಮಿ ಕಬಳಿಸುತ್ತಿರುವ ಪ್ರಕರಣಗಳನ್ನು ತಡೆಗಟ್ಟುವಂತೆ ಒತ್ತಾಯಿಸಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ನಕಲಿ ಭೂದಾಖಲೆ ಸೃಷ್ಟಿಸಿ ಭೂಮಿ ಮತ್ತು ನಿವೇಶನ ಮಾರಾಟ ಮಾಡಿರುವ ನೂರಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಕೆಲವೊಂದು ಪ್ರಕರಣಗಳು ಮಾತ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಇನ್ನೂ ಹಲವಾರು ಪ್ರಕರಣಗಳು ಇತ್ಯರ್ಥವಾಗದೆ ಉಳಿದಿವೆ. ನೂರಾರು ಜನ ತಮ್ಮ ಜಮೀನು ಮತ್ತು ನಿವೇಶನಗಳು ಕಳೆದುಕೊಂಡಿದ್ದಾರೆ. ಇನ್ನಾದರೂ ಈ ಪ್ರಕರಣಗಳಿಗೆ ಕಡಿವಾಣ ಹಾಕಲು ಸಿಐಡಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT