ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲಾ ಶ್ರೇಷ್ಠ ಕೃಷಿಕ, ಕೃಷಿಕ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ  

Published 27 ಜೂನ್ 2024, 15:46 IST
Last Updated 27 ಜೂನ್ 2024, 15:46 IST
ಅಕ್ಷರ ಗಾತ್ರ

ಇಂಡಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ, 2024ನೇ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡದ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯರನ್ನು ಗುರುತಿಸಿ ಕೃಷಿ ಮೇಳದಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿಕ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಆಸಕ್ತ ರೈತ, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ವಿಜ್ಞಾನಿ ಮತ್ತು ಮಖ್ಯಸ್ತರು, ಕೃಷಿ ವಿಜ್ಞಾನ ಕೇಂದ್ರ ಇಂಡಿಯಿಂದ ಪಡೆಯಬಹುದು. ಭರ್ಜಿ ಮಾಡಿದ ಅರ್ಜಿಯನ್ನು ತಾಲ್ಲೂಕು ಮಟ್ಟದ ಕೃಷಿ ಅಧಿಕಾರಿಗಳ ಶಿಫಾರಸ್ಸಿನೊಂದಿಗೆ ಕೃಷಿ ವಿಜ್ಞಾನ ಕೇಂದ್ರ, ಇಂಡಿಯ ಕಚೇರಿಗೆ ಜು.31ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಕಾಶ ವಿಜ್ಞಾನಿ (ಬೇಸಾಯಶಾಸ್ತ್ರ) ದೂ. 9113670190 ಅಥವಾ ಹೀನಾ ಎಂ.ಎಸ್. ವಿಜ್ಞಾನಿ (ತೋಟಗಾರಿಕೆ) ದೂ. 9731392506 ಇವರಿಗೆ ಸಂಪರ್ಕಿಸಬಹುದು. ಅರ್ಜಿಯನ್ನು ಕೃಷಿ ವಿಜ್ಞಾನ ಕೇಂದ್ರ, ಇಂಡಿ ವೆಬ್ ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT