ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸೂಚನೆ

Published 19 ಫೆಬ್ರುವರಿ 2024, 15:45 IST
Last Updated 19 ಫೆಬ್ರುವರಿ 2024, 15:45 IST
ಅಕ್ಷರ ಗಾತ್ರ

ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ 1137 ಹುದ್ದೆಗಳ ಭರ್ತಿಗೆ ರಾಜ್ಯದಾದ್ಯಂತ ಫೆ.25ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆಗಳು ನಡೆಯಲಿವೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಜಿಲ್ಲೆಯ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.

ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸಬೇಕು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‌ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಪರೀಕ್ಷಾರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರು ಮತ್ತು ಕಡಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು-ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು-ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಪರೀಕ್ಷಾ ಪೂರ್ವ ತರಬೇತಿ

ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸ್ಟಡಿ ಸರ್ಕಲ್ ಕಾರ್ಯಕ್ರಮದ ಅಡಿಯಲ್ಲಿ ಮುಂಬರುವ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಫೆ.26 ರಿಂದ ಮಾರ್ಚ್ 07ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮನುಸಾರವಾಗಿ ವಿಜಯಪುರ ನಗರದ ಮಿನಾಕ್ಷಿ ಚೌಕ್‍ನಲ್ಲಿರುವ ನಾಗಪಾಲ ಬಿಲ್ಡಿಂಗ್, ಸೌರಭ ಫಾರ್ಮಾ ಎದುರಿಗೆ, ಇಜೇರಿ ಕರಿಯರ್ ಅಕಾಡೆಮಿಯಲ್ಲಿ ಉಚಿತ ತರಬೇತಿ ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗವ ಅಭ್ಯರ್ಥಿಗಳು ಕೆಎಸ್‍ಪಿನಲ್ಲಿ ಅಧಿಸೂಚಿತ ಕಾನ್‌ಸ್ಟೇಬಲ್ ಹುದ್ದೆಗೆ ಸಲ್ಲಿಸಿರುವ ತಮ್ಮ ಅರ್ಜಿಯ ಝರಾಕ್ಸ್ ಪ್ರತಿ ಹಾಗೂ ಆಧಾರ್‌ ಕಾರ್ಡ್‌ ಝರಾಕ್ಸ್‌ನೊಂದಿಗೆ ಫೆ.26 ರ ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಖುದ್ದಾಗಿ ಅಥವಾ ಕಚೇರಿಯ empbjp@gmail.com ಇಮೇಲ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸ್ಟೇಶನ್‌ ರಸ್ತೆ, ವಿಜಯಪುರ ಅಥವಾ ದೂರವಾಣಿ : 08352-250383, ಮೊ: 9071055557, 9341777757 ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT