ವಿಜಯಪುರ: ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ‘ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದ ನಡಹಳ್ಳಿ,ಪಕ್ಷದ ಬಹುತೇಕ ಶಾಸಕರಿಗೆ ಸಚಿವರಾಗುವ ಅರ್ಹತೆ ಇದೆ. ನನಗೂ ಸಹ ಸಚಿವನಾಗಬೇಕು ಎಂಬ ಆಸೆ ಇದೆ.ಆದರೆ, ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಇಲ್ಲದೇ ಇರುವ ಸಂದರ್ಭದಲ್ಲಿ ನಮ್ಮನ್ನೇ ನಂಬಿಕೊಂಡು ಬೇರೆ ಪಕ್ಷಗಳಿಂದ ಬಂದವರಿಗೆ ಆದ್ಯತೆ ನೀಡಬೇಕಾದ ಅನಿವಾರ್ಯ ಇರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಇತಿಮಿತಿಯಲ್ಲಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದಾರೆ ಎಂದರು.

ನಿಗಮಕ್ಕೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎಂದು ಗೊತ್ತೇ ಇರಲಿಲ್ಲ. ನಾಲ್ಕೈದು ತಿಂಗಳಿನಿಂದ ಮುಖ್ಯಮಂತ್ರಿ ಅವರನ್ನು ಒಮ್ಮೆಯೂ ಭೇಟಿ ಮಾಡಿರಲಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಒಮ್ಮೆ ಮಾತ್ರ ಭೇಟಿ ಮಾಡಿದ್ದೆ. ನನ್ನ ಮೇಲೆ ವಿಶ್ವಾಸವಿಟ್ಟು ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ.ಅವರಿಗೆ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಮೂರು ಬಾರಿ ಶಾಸಕ

ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಡಹಳ್ಳಿ ಅವರು ಈ ಹಿಂದೆ ಎರಡು ಬಾರಿ ದೇವರ ಹಿಪ್ಪರಗಿ ಕೇಂತ್ರದಿಂದ ಕಾಂಗ್ರೆಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಕದತಟ್ಟಿ, ಕೆಲವೇ ದಿನಗಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಜಿಲ್ಲೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಇದ್ದರೂ ಸಹ ಅವರ ಹೊರತಾಗಿ ನಡಹಳ್ಳಿ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಒಲಿದುಬಂದಿದೆ.

ದೇಶದಲ್ಲಿ ಬಡವರು ಉಪವಾಸ ಇರಬಾರದು ಎಂಬುದು ಕೇಂದ್ರ, ರಾಜ್ಯ ಸರ್ಕಾರದ ಆಶಯವಾಗಿದ್ದು, ಈ ಸಂಬಂಧ ಆಹಾರ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಬಡಜನರ ಪರ ಕಾರ್ಯಕ್ರಮ ರೂಪಿಸುತ್ತೇನೆ

–ಎ.ಎಸ್.ಪಾಟೀಲ ನಡಹಳ್ಳಿ,ಶಾಸಕ, ಮುದ್ದೇಬಿಹಾಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.