ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನ ನಿಗದಿಗೆ ‘ಆಶಾ’ ಆಗ್ರಹ

Last Updated 22 ಸೆಪ್ಟೆಂಬರ್ 2020, 12:04 IST
ಅಕ್ಷರ ಗಾತ್ರ

ವಿಜಯಪುರ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ವೇತನ ನಿಗದಿಪಡಿಸಬೇಕು ಮತ್ತು ಬಾಕಿ ಪ್ರೋತ್ಸಾಹ ಧನ ನೀಡಬೇಕು ಎಂದು ಆಗ್ರಹಿಸಿಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರಪ್ರತಿಭಟನೆ ನಡೆಸಲಾಯಿತು.

ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಆಗಾಗ ಮಾಡಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಜರ್ ಸಮರ್ಪಕವಾಗಿ ನೀಡಬೇಕು.ಈಗಾಗಲೇ ಘೋಷಿಸಿದ ₹ 3 ಸಾವಿರ ಕೋವಿಡ್ ವಿಶೇಷ ಪ್ರೋತ್ಸಾಹ ಧನವನ್ನು ತಕ್ಷಣ ಪಾವತಿಸಬೇಕು ಎಂದು ಆಗ್ರಹಿಸಿದರು.

ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ,ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ ಜುಲೈನಲ್ಲಿ 20 ದಿನ ಕೆಲಸ ಸ್ಥಗಿತಗೊಳಿಸಿ ಹೊರಾಟ ಮಾಡಲಾಗಿತ್ತು. ಅಂದು ಮುಖ್ಯಮಂತ್ರಿಗಳ ಭರವಸೆಯ ಮೇರೆಗೆ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿತ್ತು. ಆದರೆ, ಅವರು ಕೇಳಿರುವ ಕಾಲಾವಕಾಶ ಮೀರಿ ಹೋಗಿದ್ದು, ಮಾತು ಕೊಟ್ಟು ಮರೆತ ಸರ್ಕಾರದ ವಿರುದ್ಧ ಮತ್ತೆ ಹೋರಾಟ ಮಾಡುತ್ತಿದ್ದೇವೆ ಎಂದರು.

ಆಶಾ ಕಾರ್ಯಕರ್ತೆಯರಿಗೆ ದುಡಿಮೆಗೆ ತಕ್ಕ ವೇತನ ಸಿಗುತ್ತಿಲ್ಲ. ₹ 12 ಸಾವಿರ ಬೇಡಿಕೆ ಸಹ ವಾಸ್ತವಿಕವಾಗಿದ್ದು, ಇದರಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಜಿಲ್ಲಾ ಕಾರ್ಯದರ್ಶಿ ಭಾರತಿ ದೇವಕತೆ, ಅಂಬಿಕಾ ಒಳಸಂಗ, ಮಲ್ಲಮ್ಮ ಹಡಪದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT