ಸಿಂದಗಿ: ‘ಪ್ರಸ್ತುತ ರಾಜಕೀಯ ವ್ಯವಸ್ಥೆ ತುಂಬಾ ಕಲುಷಿತಗೊಂಡಿದೆ. ಮತದಾರರು ಜಾತಿ ನೋಡಿ ಮತ ಹಾಕುತ್ತಿದ್ದಾರೆ. ಧರ್ಮದಲ್ಲಿ ರಾಜಕಾರಣ ಇರಬಾರದು. ಆದರೆ ರಾಜಕೀಯದಲ್ಲಿ ಧರ್ಮದ ಅಗತ್ಯತೆ ಇದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಜ್ಯೋತಿ ನಗರದ ಮಹಾಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಧರ್ಮಸಭೆಯನ್ನು ಉದ್ಘಾಟಿಸಿ, ‘ಜಾತ್ರೆ, ಪುರಾಣ-ಪ್ರವಚನ, ಧರ್ಮಸಭೆಗಳು ವ್ಯಕ್ತಿಯನ್ನು ಧರ್ಮವಂತರನ್ನಾಗಿಸುತ್ತವೆ. ಇಂದಿನ ಯುವ ಪೀಳಿಗೆಗೆ ಅತ್ಯಗತ್ಯವಾಗಿರುವುದು ಒಳ್ಳೆಯ ಸಂಸ್ಕಾರ, ಮಾನವೀಯ ಮೌಲ್ಯ’ ಎಂದು ತಿಳಿಸಿದರು.

ಮುಖ್ಯ ಅತಿಥಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ‘ಆರ್ಎಸ್ಎಸ್ ಜಾತ್ಯತೀತ ಸಂಘಟನೆಯಾಗಿದೆ. ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ರಜಾಕರ ಹಾವಳಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪೂರ್ವಜರು ರಜಾಕರಿಂದ ಸಾಕಷ್ಟು ನೋವು, ಸಂಕಟ, ದಬ್ಬಾಳಿಕೆ ಅನುಭವಿಸಿದ್ದರೂ ಇವರಿಗೆ ಬುದ್ಧಿ ಬಂದಿಲ್ಲ. ಕೇವಲ ವೋಟ್ ಬ್ಯಾಂಕ್ಗೋಸ್ಕರ ಮುಸ್ಲಿಮರ ತುಷ್ಟೀಕರಣದಲ್ಲಿ ತೊಡಗಿಕೊಂಡಿದ್ದಾರೆ’ ಎಂದು ಟೀಕಿಸಿದರು.

ಮಾಜಿ ಶಾಸಕ ಆನಂದ ನ್ಯಾಮಗೌಡ, ವಿಜಯಪುರ ಮಹಿಳಾ ಬ್ಯಾಂಕ್ ಉಪಾಧ್ಯಕ್ಷೆ ಸುನಂದಾ ಬಿರಾದಾರ ಮಾತನಾಡಿದರು.
ಸಿಂದಗಿ ಕ್ಷೇತ್ರದ ಮಾಜಿ ಶಾಸಕ ರಮೇಶ ಭೂಸನೂರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಎಸ್.ಕೆ.ಗುಗ್ಗರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾಗಣಗೇರಾ ಬ್ರಹನ್ಮಠದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಿಂದಗಿ ಸಾರಂಗಮಠ-ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ಅಫಜಲಪುರದ ವಿಶ್ವಾರಾಧ್ಯಮಳೇಂದ್ರ ಶಿವಾಚಾರ್ಯ ಸ್ವಾಮೀಜಿ, ಗಡಿಗೌಡಗಾಂವ ಸಂಸ್ಥಾನಮಠದ ಶಾಂತವೀರ ಶಿವಾಚಾರ್ಯ ಸ್ವಾಮೀಜಿ, ಆಲಮೇಲ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕುಮಸಗಿ ಕಲ್ಲಾಲಿಂಗಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಗೊಲ್ಲಾಳಪ್ಪಗೌಡ ಪಾಟೀಲ ಮಾಗಣಗೇರಿ, ಸಂತೋಷ ಪಾಟೀಲ ಡಂಬಳ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಿದ್ದು ಬುಳ್ಳಾ, ಬಿ.ಎಚ್.ಬಿರಾದಾರ, ಡಾ.ಸಿ.ಸಿ.ಹಿರೇಗೌಡರ, ಬಸವರಾಜ ಶೀಲವಂತ, ಮಲ್ಲಣ್ಣ ಮನಗೂಳಿ, ನಿಂಗಣ್ಣ ಮರಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.