ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ವಿಜಯಪುರ: ಸಿಂದಗಿ ತಾಲ್ಲೂಕು ನಾಗಾಂವಿ ಬಿ.ಕೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.
ಸಿಙದಗಿ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಹಲ್ಲೆಗೊಳ್ಳಗಾದ ಗುರಣ್ಣ ಸಿದ್ದನಗೌಡ ಬಿರಾದಾರ (30). ಬೆಳಿಗ್ಗೆ ಹೊಲದಲ್ಲಿ ಬೆಳೆಗಳಿಗೆ ನೀರು ಬಿಡಲು ಹೋದ ಸಂದರ್ಭದಲ್ಲಿ ಮುಖಕ್ಕೆ ಬಟ್ಟೆಯಿಂದ ಮುಚ್ಚಿ ಹಲ್ಲೆ ನಡೆಸಿದ್ದಾರೆ.
ಕುತ್ತಿಗೆ, ಕಾಲಿಗೆ ಚಾಕುವಿನಿಂದ ಇರಿದಿದ್ದಾರೆ. ಹಲ್ಲೆ ಮಾಡಿದ ಇಬ್ಬರು ವ್ಯಕ್ತಿಗಳು ಮುಖ ಮುಚ್ಚಿಕೊಂಡಿದ್ದರು. ಏನನ್ನು ಮಾತನಾಡದೇ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಆರೋಪಿಸಿದ್ದಾರೆ. ಗಾಯಾಳು ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.