ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ತೊರವಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿ ಆವರಣದಲ್ಲಿ ಗಿರಿಜನ ಉಪಯೋಜನೆ (ಟಿಎಸ್ಪಿ) ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿದ್ಯಾರ್ಥಿ ವಸತಿ ನಿಲಯದ ನೂತನ ಕಟ್ಟಡ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಒಪನ್ ಜಿಮ್ ಸೇರಿದಂತೆ ವಾಕಿಂಗ್ ಟ್ರ್ಯಾಕ್ ಇನ್ನಿತರ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಮಾತನಾಡಿ, ಮೈಸೂರು ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳಂತೆಯೇ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವೂ ಬೆಳಯುವಂತಾಗಬೇಕು. ಆ ನಿಟ್ಟಿನಲ್ಲಿ ಸರ್ಕಾರದಿಂದಲೂ ಅಗತ್ಯ ನೆರವು ನೀಡಲಾಗುವುದು ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಎಂ.ರಾಮಚಂದ್ರಗೌಡ, ದಶರಥ ಪದ್ಮಶಾಲಿ, ಎಸ್.ಎಂ.ಹುರಕಡ್ಲಿ, ಡಿ.ಎನ್ ಪಾಟೀಲ, ನರಸಿಂಹ ರಾಯಚೂರ, ನೀತಾ ಎಸ್.ರಾವ್, ಡಾ.ಎಸ್.ಎಂ.ನದಾಫ್, ಶೋಭಾ ಹೂಗಾರ, ಕಿರಣ್ ದೇಸಾಯಿ, ವಿ.ಡಿ. ನಾಯಕ, ಕೆಎಲ್ಎನ್ ಮೂರ್ತಿ, ಕಟ್ಟಿ, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.