ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಒಳಪಂಗಡ ಒಗ್ಗೂಡಿಸುವ ಪ್ರಯತ್ನ: ಶಾಸಕ ಶಾಮನೂರು ಶಿವಶಂಕರಪ್ಪ

Published 1 ಡಿಸೆಂಬರ್ 2023, 15:59 IST
Last Updated 1 ಡಿಸೆಂಬರ್ 2023, 15:59 IST
ಅಕ್ಷರ ಗಾತ್ರ

ವಿಜಯಪುರ: ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ನಾವೆಲ್ಲ ಒಂದು, ನಾವೆಲ್ಲ ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು, ಸಮಾಜಕ್ಕೆ ಒಂದು ಒಳ್ಳೆಯ ಸಂದೇಶವನ್ನು ನೀಡಬೇಕಿದೆ ಎಂದು ವೀರಶೈವ ಮಹಾಸಭಾ ಅಧ್ಯಕ್ಷ,  ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ಇಲ್ಲಿನ ಆನಂದನಗರದಲ್ಲಿರುವ ಶ್ರೀ ದಾನಮ್ಮ ದೇವಿಯ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

12 ನೇ ಶತಮಾನದ ಅಣ್ಣ ಬಸವಣ್ಣನವರ ಸಮಕಾಲೀನವರಾದ ಶಿವಶರಣೆ ದಾನಮ್ಮ ದೇವಿಯ ದೇವಸ್ಥಾನ ಪ್ರತಿ ಊರಿನಲ್ಲಿಯೂ ಇರುವುದು ವಿಶೇಷ ಎಂದರು.

ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ದೇವಸ್ಥಾನದ ಯಾವುದೇ ಅಭಿವೃದ್ಧಿ ಕಾರ್ಯವನ್ನು ನಿರ್ವಹಿಸಿ ಹೆಚ್ಚಿನ ಅನುದಾನವನ್ನು ನೀಡುತ್ತೇನೆ ಎಂದರು.

ಶಿವಾಚಾರ್ಯ ಸ್ವಾಮೀಜಿ  ಹಾಗೂ ಮಮದಾಪುರದ ಅಭಿನವ ಮುರುಗೇಂದ್ರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ್, ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷ ವಿ. ಸಿ. ನಾಗಠಾಣ,  ಅಖಿಲ ಭಾರತೀಯ ವೀರಶೈವ ಮಹಾಸಭಾ ಉಪಾಧ್ಯಕ್ಷ ಅಥಣಿ ವೀರಣ್ಣ, ದೇವಸ್ಥಾನದ ಅಧ್ಯಕ್ಷ ಅಪ್ಪು ಇಟ್ಟಂಗಿ, ಬಸವರಾಜ ಮರನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT