ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಮಾಲಿನಿ ಪ್ರಭುಗೌಡಗೆ ಪ್ರಶಸ್ತಿ

Last Updated 20 ಮಾರ್ಚ್ 2023, 5:44 IST
ಅಕ್ಷರ ಗಾತ್ರ

ವಿಜಯಪುರ: ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರಾದ, ಖ್ಯಾತ ನೇತ್ರ ತಜ್ಞೆ ಡಾ.ಮಾಲಿನಿ ಪ್ರಭುಗೌಡ ಅವರು ರಾಷ್ಟ್ರ ಮಟ್ಟದ ಯುನಿವರ್ಸಲ್ ಐಕಾನ್ ವುಮನ್ ಅಚಿವರ್ಸ್‌ ಅವಾರ್ಡ್‌ಗೆ ಭಾಜನರಾಗಿದ್ದಾರೆ.

ವಿಜಯಪುರ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಳೆದ 20 ವರ್ಷಗಳಿಂದ ಉಚಿತ ನೇತ್ರ ಚಿಕಿತ್ಸೆ ಹಾಗೂ ನೇತ್ರದಾನದ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅಂದತ್ವ ನಿವಾರಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಇವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ.

ಯುನಿವರ್ಸಲ್ ಫಿಲ್ಮ್ ಮೇಕರ್ಸ್‌ ಕೌನ್ಸಿಲ್ ಮತ್ತು ನವ ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಬೆಂಗಳೂರಿನ ಟೌನ್ ಹಾಲಿನಲ್ಲಿ ಮಾರ್ಚ್‌ 20ರಂದು ಸಂಜೆ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT