ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳಲ್ಲಿ ಅಪೌಷ್ಟಿಕತೆ;ಪಾಲಕರಲ್ಲಿ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶ ಅರವಿಂದ

Published : 6 ಸೆಪ್ಟೆಂಬರ್ 2024, 13:31 IST
Last Updated : 6 ಸೆಪ್ಟೆಂಬರ್ 2024, 13:31 IST
ಫಾಲೋ ಮಾಡಿ
Comments

ವಿಜಯಪುರ: ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಟಿಕತೆಯ ಕುರಿತು ಪಾಲಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಗರಗಿ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಮತ್ತು ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬರುತ್ತಿದ್ದು, ಈ ಕುರಿತು ಜನರಿಗೆ ಜಾಗೃತಿ ಮೂಡಿಸಲು, ಸಂಬಂಧಿಸಿದ ಇಲಾಖೆ ಹಾಗೂ ಆಯುರ್ವೇದ ಮಹಾವಿದ್ಯಾಲಯ ಅರಿವು ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ ಮಾತನಾಡಿದರು.

50 ಮಕ್ಕಳ ಆರೋಗ್ಯ ತಪಾಸಣೆ ಉಚಿತವಾಗಿ ನಡೆಸಿ ಔಷಧ ವಿತರಣೆ ಮಾಡಲಾಯಿತು. ಗರ್ಭಿಣಿಯರಿಗೆ ಸೀಮಂತ ಮತ್ತು ಮಕ್ಕಳಿಗೆ ಅನ್ನಪ್ರಾಶನ ಸಂಸ್ಕಾರ, ಪ್ರತಿ ತಾಯಿಗೊಂದು ಗಿಡ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಾವಿದ್ಯಾಲಯದ ಶ್ರೀವನದಲ್ಲಿ ಸಸಿ ನೆಡಲಾಯಿತು.

ಬಸವರಾಜ ಜಿಗಳೂರ, ಡಾ.ಜಾವೇದ ಬಾಗಾಯತ, ಕೆ.ಕೆ.ಚವಾಣ್, ಡಾ.ಕೆ.ಎ.ಪಾಟೀಲ, ಅನಿಲ ಹಳ್ಳಿ, ಡಾ.ವಿಜಯಲಕ್ಷ್ಮಿ ಬೆನಕಟ್ಟಿ, ಡಾ.ದೌಲಬಿ ಚೌಧರಿ, ಹೈದರಖಾನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT