ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯತ್ನಾಳ ಮಾಲೀಕತ್ವದ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಜ.22ರವರೆಗೆ ಉಚಿತ ಹೆರಿಗೆ

ಅಯೋಧ್ಯೆ ಸಂಭ್ರಮೋತ್ಸವ
Published 18 ಜನವರಿ 2024, 21:13 IST
Last Updated 18 ಜನವರಿ 2024, 21:13 IST
ಅಕ್ಷರ ಗಾತ್ರ

ವಿಜಯಪುರ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆ ಹಾಗೂ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ವಿಜಯಪುರದ ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿ (ಜೆಎಸ್‌ಎಸ್‌) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಯೋಧ್ಯೆ ಸಂಭ್ರಮೋತ್ಸವ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಈ ಆಸ್ಪತ್ರೆಯಲ್ಲಿ ಗುರುವಾರದಿಂದ  ಜನವರಿ 22ರವರೆಗೆ ಉಚಿತ ಹೆರಿಗೆಗೆ ಅವಕಾಶ ಕಲ್ಪಿಸಲಾಗಿದೆ.

‘ಈ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಹುಟ್ಟುವ ಮಗುವನ್ನು ರಾಮ ಮತ್ತು ಸೀತಾದೇವಿ ಪ್ರತಿರೂಪವೆಂದು ಪರಿಗಣಿಸಿ ಹೆರಿಗೆ ಸಂಪೂರ್ಣ ಉಚಿತವಾಗಿ ನೆರವೇರಿಸುವಂತೆ ಆಸ್ಪತ್ರೆ ಮಾಲೀಕ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಪೇಕ್ಷೆಯಾಗಿದೆ. ಅಯೋಧ್ಯೆಯಲ್ಲಿ ಜರುಗುವ ರಾಮ ಮಂದಿರದ ಉದ್ಘಾಟನೆಯ ಸಮಯವನ್ನು ಸಾರ್ಥಕಗೊಳಿಸುವ ಉದ್ದೇಶದಿಂದ ಉಚಿತ ಕೊಡುಗೆ ನೀಡಲಾಗುತ್ತಿದೆ’ ಎಂದು ಜೆಎಸ್‍ಎಸ್ ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಶರಣ ಮಳಖೇಡ್ಕರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT