ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ

Last Updated 15 ಆಗಸ್ಟ್ 2022, 7:13 IST
ಅಕ್ಷರ ಗಾತ್ರ

ವಿಜಯಪುರ: 'ಗುಮ್ಮಟನಗರಿ' ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವನ್ನು ಸಡಗರ, ಸಂಭ್ರಮದಿಂದ ಸೋಮವಾರ ಅಚರಿಸಲಾಯಿತು.

ಜಿಟಿಜಿಟಿ ಮಳೆ, ದಟ್ಟ ಮೋಡ ಕವಿದ ವಾತಾವರಣದ ನಡುವೆಯೂ ಶಾಲೆ, ಕಾಲೇಜು, ಸರ್ಕಾರಿ ಕಚೇರಿ, ಕೋರ್ಟ್, ಸಂಘ, ಸಂಸ್ಥೆಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶಭಕ್ತಿ ಮೆರೆಯಲಾಯಿತು. ದೇಶಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೆಳೆದವು.
ಕತ್ತಿ ಧ್ವಜಾರೋಹಣ:ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರೋತ್ಸವ ಸಂದೇಶ ನೀಡಿದ ಸಚಿವ ಕತ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿದರು.

ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ಅಹಿಂಸೆ, ಸತ್ಯಾಗ್ರಹಗಳ ಮೂಲಕ ಬ್ರಿಟಿಷರನ್ನು ಮಣಿಸಿದ ಸ್ವಾತಂತ್ರ್ಯ ಸಂಗ್ರಾಮ ಅದ್ವಿತೀಯ ಎಂದರು.

ರಾಷ್ಟ್ರಗೀತೆ, ನಾಡಗೀತೆ ಬಳಿಕ ಆಕರ್ಷಕ ಪಥಸಂಚಲನ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಹಾಗೂ
ಮಾಜಿ ಸೈನಿಕರಿಗೆ, ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರಿಗೆ ಸಚಿವರು ಸನ್ಮಾನಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ,ಸಂಸದ ರಮೇಶ ಜಿಗಜಿಣಗಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಜಿಲ್ಲಾ ಪಂಚಾಯ್ತಿ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT