ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವನಬಾಗೇವಾಡಿ, ಕೂಡಗಿ ಪೊಲೀಸ್ ಠಾಣೆ ಸೀಲ್‌ಡೌನ್‌

ಇಬ್ಬರು ಪೊಲೀಸರಿಗೆ ಕೋವಿಡ್‌ ದೃಢ: ಎಸ್‌.ಪಿ.ಅನುಪಮ್‌ ಅಗರವಾಲ್‌
Last Updated 4 ಜುಲೈ 2020, 15:33 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್-19 ಪ್ರಯುಕ್ತ ಕಂಟೈನ್ಮೆಂಟ್ ಝೋನ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕರ್ತವ್ಯ ನಿರ್ವಹಿಸಿದ ಜಿಲ್ಲೆಯ ಇಬ್ಬರು ಸಿಬ್ಬಂದಿಗೆ ಶನಿವಾರ ಕೋವಿಡ್‌ ಪಾಸಿಟಿವ್‌ ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದ್ದಾರೆ

ಬಸವನ ಬಾಗೇವಾಡಿ ಹಾಗೂ ಕೂಡಗಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಸಿಬ್ಬಂದಿಗೆ ಸೋಂಕು ದೃಢವಾಗಿರುವುದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ, ಎರಡೂ ಠಾಣೆಗಳಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತ ಸಿಬ್ಬಂದಿಯನ್ನು ಹೋಂಕ್ವಾರಂಟೈನ್‌ ಮಾಡಲಾಗಿದೆ ಎಂದು ಹೇಳಿದರು.

ಕೂಡಗಿ ಪೊಲೀಸ್ ಠಾಣೆಯನ್ನು ನಿಡಗುಂದಿ ಪೊಲೀಸ್ ಠಾಣೆ ಆವರಣದಲ್ಲಿ ಹಾಗೂ ಬಸವನ ಬಾಗೇವಾಡಿ ಪೊಲೀಸ್ ಠಾಣೆಯನ್ನು ಬ.ಬಾಗೇವಾಡಿ ಡಿಎಸ್‌ಪಿ ಅವರ ಖಾಲಿ ಇರುವ ಪೊಲೀಸ್ ವಸತಿ ಗೃಹಕ್ಕೆ ಸ್ಥಳಾಂತರಿಸಿ, ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಡಗುಂದಿ ವೈದ್ಯರಿಗೆ ಕೋವಿಡ್‌

ನಿಡಗುಂದಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರಿಗೆ ಕೋವಿಡ್‌ ಪಾಸಿಟಿವ್ ಬಂದ ಕಾರಣ ಶನಿವಾರ ಸಂಜೆ ಸೀಲ್‌ಡೌನ್‌ ಮಾಡಲಾಗಿದೆ.

ವೈದ್ಯರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ ತಿಳಿಸಿದ್ದಾರೆ.

507ಕ್ಕೆ ಏರಿದ ಕೋವಿಡ್‌ ಪೀಡಿತರ ಸಂಖ್ಯೆ

ಜಿಲ್ಲೆಯಲ್ಲಿ ಶನಿವಾರ 37 ಜನರಿಗೆ ಕೋವಿಡ್‌ ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ 507ಕ್ಕೆ ಏರಿಕೆಯಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 374 ಜನ ಗುಣಮುಖರಾಗಿದ್ದಾರೆ. 11 ಜನ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT