ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸರ್ಕಾರ ದಿವಾಳಿ: ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ

Published 27 ಏಪ್ರಿಲ್ 2024, 8:07 IST
Last Updated 27 ಏಪ್ರಿಲ್ 2024, 8:07 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರ ಕಷ್ಟಕ್ಕೆ ಸ್ಪಂದಿಸಬೇಕಿದ್ದ ಕಾಂಗ್ರೆಸ್ ಸರ್ಕಾರ ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

ಮುದ್ದೇಬಿಹಾಳದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ತನ್ನ ಪಾಲನ್ನು ರಾಜ್ಯಕ್ಕೆ ಕೊಡಲಿದೆ.ಆದರೆ, ಕಾಂಗ್ರೆಸ್ ಸರ್ಕಾರದವರು ಪರಿಹಾರ ಕೊಟ್ಟಿಲ್ಲ ಎಂದು ಕೇಂದ್ರದ ಮೇಲೆ ದೂಷಣೆ ಮಾಡುತ್ತಿದ್ದಾರೆ. ‘ನಾನು ಸಿಎಂ ಆಗಿದ್ದಾಗ ಮೊದಲು ರೈತರಿಗೆ ಪರಿಹಾರ ಕೊಟ್ಟು ನಂತರ ಕೇಂದ್ರದ ಪರಿಹಾರ ಕೇಳುತ್ತಿದ್ದೇವು. ಆದರೆ, ಇವರು ಪ್ರತಿಯೊಂದಕ್ಕೂ ಕೇಂದ್ರದವರ ಮೇಲೆ ಬೆರಳು ತೋರಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ‘ ಎಂದು ಆರೋಪಿಸಿದರು.

ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ, ಮುಖಂಡರಾದ ವಿಜುಗೌಡ ಪಾಟೀಲ, ಪ್ರಭುಗೌಡ ದೇಸಾಯಿ, ಕಾಶೀಬಾಯಿ ರಾಂಪೂರ, ಮಂಗಳಾದೇವಿ ಬಿರಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT