ಸೋಮವಾರ, ಆಗಸ್ಟ್ 3, 2020
27 °C

ವಿಜಯಪುರ | ಗುಮ್ಮಟನಗರಿಯಲ್ಲಿ ಬಕ್ರೀದ್‌ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಅನ್ನು ಶನಿವಾರ ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಶ್ರದ್ಧೆ– ಭಕ್ತಿಯಿಂದ ಆಚರಿಸಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಗೆ ನಿರ್ಬಂಧವಿದ್ದ ಕಾರಣ ಮಸೀದಿಗಳಲ್ಲಿ ಪರಸ್ಪರ ಅಂತರ ಕಾಯ್ದುಕೊಂಡು ಬೆರಳೆಣಿಕೆ ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಿದರು.

ಬಹುತೇಕ  ಮುಸ್ಲಿಮರು ತಮ್ಮ ತಮ್ಮ  ಬಡಾವಣೆಗಳಲ್ಲಿನ ಮಸೀದಿಗಳಲ್ಲಿ  ಬೆಳಿಗ್ಗೆ 6ರಿಂದ 9ರ ಅವಧಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಮಸೀದಿಯೊಳಗೆ ಒಮ್ಮಗೆ  50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ ಮಸೀದಿ ಹೊರಗಡೆ ಮುಸ್ಲಿಮರು ಸರದಿಯಲ್ಲಿ ಕಾಯುವಂತಾಯಿತು.

ಆರಂಭದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿ, ಸ್ಯಾನಿಟೈಸ್‌ ಹಚ್ಚಲಾಯಿತು. ಮಾಸ್ಕ್‌ ಧರಿಸಿದವರನ್ನು ಮಾತ್ರ ಪ್ರಾರ್ಥನೆಗೆ ಬಿಡಲಾಯಿತು. ಎಲ್ಲ ಸಿದ್ಧತೆಗಳನ್ನು ಆಯಾ ಮಸೀದಿಯ ನಿರ್ವಹಣಾ ಸಮಿತಿಗೆ ವಹಿಸಲಾಗಿತ್ತು. 

ನಗರದಲ್ಲಿ ಸಾಮೂಹಿಕ ಪ್ರಾರ್ಥನೆ ಗೆ ನಿಷೇಧವಿದ್ದ ಕಾರಣ, ಈ ಬಾರಿ ಎಲ್ಲ ಕಡೆ ಪೊಲೀಸ್‌ ಕಾವಲು ಇತ್ತು

ಹೊಸ ಉಡುಗೆ ತೊಟ್ಟು ಬಂದ  ಮಕ್ಕಳು, ಹಿರಿಯರು, ಪರಸ್ಪರ ಆಲಿಂಗಿಸಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಬಹುತೇಕ ಮುಸ್ಲಿಮರು ತಮ್ಮ ತಮ್ಮ ಮನೆಗಳಲ್ಲೇ ನಮಾಜ್‌ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು