ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುದ್ದೇಬಿಹಾಳ: ಭಾವೈಕ್ಯತೆಯಿಂದ ಹಬ್ಬ ಆಚರಿಸಿ: ಪಿಎಸ್ಐ ಸಂಜಯ ತಿಪರೆಡ್ಡಿ

Published 16 ಜೂನ್ 2024, 14:10 IST
Last Updated 16 ಜೂನ್ 2024, 14:10 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ಸೌಹಾರ್ದತೆಗೆ ಹೆಸರಾಗಿರುವ ಪಟ್ಟಣದಲ್ಲಿ ಹಿಂದೂ ಮುಸ್ಲಿಂರು ಸಹೋದರರಂತೆ ಜೀವನ ನಡೆಸುತ್ತಿದ್ದಾರೆ ಎಂದು ಪಿಎಸ್ಐ ಸಂಜಯ ತಿಪರೆಡ್ಡಿ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗಂತೆ ಹಬ್ಬದ ಆಚರಿಸಬೇಕು. ಕೆಲವು ಕಿಡಿಗೇಡಿಗಳು ಹಬ್ಬಿಸುವ ವದಂತಿಗಳಿಗೆ ಯಾರೊಬ್ಬರೂ ಕಿವಿಗೊಡಬೇಡಿ ಎಂದು ಹೇಳಿದರು.

ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ, ಮುಖಂಡರಾದ ಕಾಮರಾಜ ಬಿರಾದಾರ, ಸದ್ದಾಂ ಕುಂಟೋಜಿ, ಸದು ಮಠ, ಬಾಪ್ ಢವಳಗಿ, ಸಂಗಣ್ಣ ಮೇಲಿನಮನಿ, ಮಹಾಂತೇಶ ಬೂದಿಹಾಳಮಠ, ರಿಯಾಜ್ ನಾಯ್ಕೋಡಿ, ಅಲ್ಲಾಭಕ್ಷ ಟಕ್ಕಳಕಿ, ಸಿಬ್ಬಂದಿ ಮಲ್ಲು ಬೋಳರೆಡ್ಡಿ, ಶಿವಾನಂದ ಮ್ಯಾಗೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT