ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಕ್ರೀದ್ ಇಂದು: ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

Last Updated 31 ಜುಲೈ 2020, 15:09 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಆಗಸ್ಟ್‌1ರಂದುಆಚರಿಸುವ ಮುಸ್ಲಿಮರ ಪವಿತ್ರ ಬಕ್ರೀದ್ ಅಂಗವಾಗಿ ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ವಹಿಸುವುದನ್ನು ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ತಿಳಿಸಿದ್ದಾರೆ.

ಬಕ್ರೀದ್ ದಿನದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವಂತಹ ಮಸೀದಿಗಳ ಆಡಳಿತ ಸಮಿತಿಗಳು ಸರ್ಕಾರದ ಆದೇಶದನ್ವಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಆಯಾ ಮಸೀದಿಗಳಲ್ಲಿ ಗರಿಷ್ಠ 50 ಜನ ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು. ಒಂದು ವೇಳೆ ಅಧಿಕ ಜನ ಆಗಮಿಸಿದ್ದಲ್ಲಿ ಎರಡು, ಮೂರು ಬ್ಯಾಚ್‍ಗಳಲ್ಲಿ ನಮಾಜ್ ನಿರ್ವಹಿಸಬಹುದು ಎಂದು ಅವರು ಹೇಳಿದ್ದಾರೆ.

ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ ಎಂದು ಅವರು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT