ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಹೆಸರು ಕೆಡಿಸಲು ಷಡ್ಯಂತ್ರ: ಯತ್ನಾಳ

Last Updated 27 ಜನವರಿ 2021, 12:04 IST
ಅಕ್ಷರ ಗಾತ್ರ

ವಿಜಯಪುರ:ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಕೆಡಿಸಲು ದೇಶವಿರೋಧಿ ಶಕ್ತಿಗಳು ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿವೆ ಎಂದುಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪ್ರಗತಿಗಾಗಿ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದೆ. ಈ ಮಸೂದೆಗಳನ್ನು ವಿಫಲಗೊಳಿಸಲು ಕಾಂಗ್ರೆಸ್, ಕಮ್ಯುನಿಸ್ಟ್ ಮತ್ತು ಆಮ್ ಆದ್ಮಿ ಪಕ್ಷಗಳು ಪ್ರಯತ್ನಿಸುತ್ತಿವೆ. ಇದರಲ್ಲಿ ಚೀನಾ ಮತ್ತು ಪಾಕಿಸ್ತಾನದ ಕೈವಾಡವೂ ಇದೆ ಎಂದರು.

ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಬೆಳೆಸಿರುವ ಎಲ್ಲ ದೇಶ ವಿರೋಧಿ ಸಂಘಟನೆಗಳು ದೆಹಲಿಯಲ್ಲಿ ನಡೆದ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದವು ಎಂದು ಹೇಳಿದರು.

ರೈತರ ಹೆಸರಿನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಖಲಿಸ್ತಾನ ಹೋರಾಟಗಾರರು ಶಾಮೀಲಾಗಿರುವ ಬಗ್ಗೆ ಗುಪ್ತಚರ ಇಲಾಖೆ ಮೊದಲೇ ಮಾಹಿತಿ ನೀಡಿತ್ತು ಎಂದರು.

ಪಕ್ಷದ ವರ್ಚಸ್ಸಿಗೆ ದಕ್ಕೆ:

ಸಚಿವರಿಗೆ ಖಾತೆ ಹಂಚಿಕೆ ವೇಳೆ ಪದೇ ಪದೇ ಬದಲಾವಣೆ ಮಾಡಿರುವುದು ಪಕ್ಷದ ವರ್ಚಸ್ಸಿಗೆ ದಕ್ಕೆಯಾಗಿದೆ ಎಂದು ಯತ್ನಾಳ ಅಭಿಪ್ರಾಯಪಟ್ಟರು.

ಮಾಧುಸ್ವಾಮಿ ಸಮರ್ಥ ಸಚಿವರಿದ್ದಾರೆ. ವಿಧಾನಸಭೆಯಲ್ಲಿ ಪಕ್ಷವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಅಧಿವೇಶನದಲ್ಲಿ ವಿರೋಧ ಪಕ್ಷಗಳ ಮುಖಂಡರ ಟೀಕೆಗಳಿಗೆ ಸಮರ್ಥವಾಗಿ ಉತ್ತರ ನೀಡಿ ಹಿಮ್ಮೆಟ್ಟಿಸಿದ್ದಾರೆ. ಅಂತಹ ಸಚಿವರ ಖಾತೆ ಪದೇಪದೇ ಬದಲಾವಣೆ ಮಾಡಿದರೆ ಅವರಿಗೆ ಮುಜುಗರವಾಗುತ್ತದೆ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಜಮೀರ್‌ ಅಹ್ಮದ್, ಕೆ.ಜೆ.ಜಾರ್ಜ್‌‌ ಅವರೊಂದಿಗೆ ನಮ್ಮ ಮುಖ್ಯಮಂತ್ರಿ ಪಾರ್ಟನರ್‌ ಆಗಿದ್ದಾರೆ. ಹೀಗಾಗಿ ಅವರ ವಿರುದ್ಧ ಮಾತನಾಡುವವರನ್ನು ಮುಖ್ಯಮಂತ್ರಿಗಳೇ ಸಹಿಸುವುದಿಲ್ಲ. ಅವರೇ ಮುಗಿಸಿಬಿಡುತ್ತಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT