ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಅಭಿವೃದ್ಧಿ ಕಾಮಗಾರಿಗಳಿಗೆ ಯತ್ನಾಳ ಭೂಮಿಪೂಜೆ

Last Updated 1 ಮಾರ್ಚ್ 2023, 14:38 IST
ಅಕ್ಷರ ಗಾತ್ರ

ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬುಧವಾರ ಭೂಮಿಪೂಜೆ ನೆರವೇರಿಸಿದರು.

ರಾಷ್ಟ್ರೀಯ ಹೆದ್ದಾರಿಯ ಪಾನಿ ನಗರದಲ್ಲಿ ಅಲ್ಲಿನ ನಾಗರಿಕರ ಬೇಡಿಕೆಯಂತೆ ನೂತನ ನಗರ ಬಸ್ ಸಾರಿಗೆ ಸಂಚಾರಕ್ಕೆ ಚಾಲನೆ ನೀಡಿದ ಶಾಸಕರು, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಎದುರಿನ ಬರಗಾಲ ನಿವಾರಣಾ ಕಚೇರಿ ಬಳಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿದ ಹಿನ್ನೆಲೆಯಲ್ಲಿ ಸವಿನೆನಪಿಗಾಗಿ ₹ 2 ಕೋಟಿ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ಸ್ಮಾರಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ನಂತರ ವಾರ್ಡ ನಂ.7ರ ಡೊಬಳೆಗಲ್ಲಿಯಲ್ಲಿ ₹20 ಲಕ್ಷ ಅನುದಾನದಲ್ಲಿ ಅಂಗನವಾಡಿ ಕಟ್ಟಡದ ನಿರ್ಮಾಣ ಕಾಮಗಾರಿಗೆ ಹಾಗೂ ಕೌಜಲಗಿ ತಾಂಡಾದಲ್ಲಿ ₹20 ಲಕ್ಷ ಅನುದಾನದಲ್ಲಿ ಅಂಗನವಾಡಿ ಕಟ್ಟಡದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ರಂಭಾಪುರದಲ್ಲಿ ₹ 60 ಲಕ್ಷ ಅನುದಾನದಲ್ಲಿ ಆಂತರಿಕ ಒಳಚರಂಡಿ ಮತ್ತು ಹೆದ್ದಾರಿ ಕ್ರಾಸ್ ಮಾಡಿ ಮುಖ್ಯಚರಂಡಿಗೆ ಜೋಡಿಸುವ ಒಳಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ, ಅಲ್ಲಿಯೇ ₹1 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ ಕಚೇರಿ (ಲೋಕಲ್ ಅಡಿಟ್) ಕಟ್ಟಡದ ಉದ್ಘಾಟನೆ ಮಾಡಿದರು.

ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT