ಶನಿವಾರ, ಜನವರಿ 22, 2022
16 °C
ಭರವಸೆಯಲ್ಲೇ ಕಾಲ ಕಳೆದರೆ ಅಧಿಕಾರದಿಂದ ಇಳಿಸಿ ಬಿಡೋಣ–ವಿಜಯಾನಂದ ಕಾಶಪ್ಪನವರ

ಮೀಸಲಾತಿ ನೀಡದಿದ್ದರೆ ಬೊಮ್ಮಾಯಿ ಸರ್ಕಾರಕ್ಕೂ ಶಾಕ್‌: ಬಸನಗೌಡ ಪಾಟೀಲ ಯತ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಲತವಾಡ (ವಿಜಯಪುರ): ‘ಮೀಸಲಾತಿ ಕೊಡುವುದಾಗಿ ಮಾತು ಕೊಟ್ಟು ತಪ್ಪಿದ್ದಕ್ಕೆ ಯಡಿಯೂರಪ್ಪ ಅಧಿಕಾರ ಕಳೆದುಕೊಂಡ. ಇನ್ನು ನಮಗೆ 2ಎ ಮೀಸಲಾತಿ ನೀಡದಿದ್ದರೆ ಬೊಮ್ಮಾಯಿ ಸರ್ಕಾರಕ್ಕೂ ಶಾಕ್ ಗ್ಯಾರಂಟಿ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಿತ್ತೂರ ಚನ್ನಮ್ಮ ಸಾಮಾಜಿಕ ಸೇವಾ ಸಂಘದಡಿ ಗುರುವಾರ ಹಮ್ಮಿಕೊಂಡಿದ್ದ ಕಿತ್ತೂರ ಚನ್ನಮ್ಮನ 243ನೇ ಜಯಂತಿ ಹಾಗೂ 198ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಬೇಡಿಕೆಗೆ ಅನುಗುಣವಾಗಿ ಮೀಸಲಾತಿ ನೀಡದವರು ಮಣ್ಣು ಮುಕ್ಕಿದ್ದಾರೆ. ಬೊಮ್ಮಾಯಿ ಸಹ 3 ತಿಂಗಳಲ್ಲಿ ಮೀಸಲಾತಿ ಘೋಷಿಸುವ ಭರವಸೆ ನೀಡಿದ್ದಾರೆ. ಕಾದು ನೋಡೋಣ’ ಎಂದು ಹೇಳಿದರು.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಮುಖ್ಯಮಂತ್ರಿ ಬೊಮ್ಮಾಯಿ ನಮ್ಮ ಸಮಾಜಕ್ಕೆ ಯಾವ ಕೊಡುಗೆ ಕೊಡುತ್ತಾರೋ ನೋಡೋಣ. ಇವರೂ ಭರವಸೆಯಲ್ಲೇ ಕಾಲ ಕಳೆದರೆ ಅಧಿಕಾರದಿಂದ ಕೆಳಗೆ ಇಳಿಸಿ ಬಿಡೋಣ’ ಎಂದರು.

ಕೂಡಲಸಂಗಮ ಬಸವಜಯ ಮೃತ್ಯುಂಜಯ ಶ್ರೀಗಳು ಆಶೀರ್ವಚನ ನೀಡಿ, ‘ಮೀಸಲಾತಿ ಸಿಗುವವರೆಗೂ ಹೋರಾಟ ಕೈ ಬಿಡುವ ಪ್ರಶ್ನೆಯೇ ಇಲ್ಲ. ಈ ಬಾರೀ ಸುಮಾರು 20 ಲಕ್ಷ ಮಂದಿಯನ್ನು ಸೇರಿಸಿ ಹೋರಾಟ ಮಾಡುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು