ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಕ್ರಮಕ್ಕೆ ಯತ್ನಾಳ ಮನವಿ

Published 11 ಜುಲೈ 2024, 12:39 IST
Last Updated 11 ಜುಲೈ 2024, 12:39 IST
ಅಕ್ಷರ ಗಾತ್ರ

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

‘ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಅಲ್ಲದೇ, ರಾಜ್ಯ ದಿವಾಳಿಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಬಳಸಿ ಕೂಡಲೇ ರಾಜ್ಯ ಸರ್ಕಾರದ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.

‘ಅಕ್ಕಿ ವಿತರಣೆಯಲ್ಲೂ ರಾಜ್ಯ ತಪ್ಪು ಹೆಜ್ಜೆ ಇಡುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಆದರೆ, ಎಷ್ಟು ನಕಲಿ ಕಾರ್ಡ್‌ಗಳು ವಿತರಣೆಯಾಗಿದೆ ಎಂಬ ಆಡಿಟ್ ಇದುವರೆಗೂ ಆಗಿಲ್ಲ. ಬಡತನ ರೇಖೆಗಿಂತ ಮೇಲೆ ಇರುವವರೇ ಹೆಚ್ಚು ಬಿ.ಪಿ.ಎಲ್ ಕಾರ್ಡ್ ಹೊಂದಿದ್ದಾರೆ. ಸರ್ಕಾರ ಇವರ ಮೇಲೆ ಕ್ರಮ ಕೈಗೊಳ್ಳದೇ, ಎಲ್ಲರಿಗೂ ಉಚಿತ ಅಕ್ಕಿ ನೀಡುತ್ತಿದೆ ಎಂದೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ನೀಡಿರುವ ವರದಿಯನ್ನು ತೋರಿಸಿ ವಿವರಿಸಿದೆ’ ಎಂಬುದನ್ನು ಸಚಿವರ ಗಮನಕ್ಕೆ ತಂದರು. 

ವಿಷಯ ಆಲಿಸಿದ ಸಚಿವರು, ವಿವರಗಳನ್ನು ಪರಿಶೀಲಿಸಿ ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಯತ್ನಾಳ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT