ಭಾನುವಾರ, ಮೇ 22, 2022
23 °C

ಕುತೂಹಲ ಮೂಡಿಸಿದ ಬಸನಗೌಡ ಪಾಟೀಲ ಯತ್ನಾಳ–ರಮೇಶ ಜಾರಕಿಹೊಳಿ ಗೌಪ್ಯ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭಾನುವಾರ ನಗರದಲ್ಲಿ ಗೌಪ್ಯವಾಗಿ ಭೇಟಿ ಮಾಡಿ, ಸುಮಾರು ಒಂದು ತಾಸು ಚರ್ಚೆ ನಡೆಸಿರುವುದು ರಾಜಕೀಯ ಕುತೂಹಲ ಕೆರಳಿಸಿದೆ.

ನಗರದ ಹೊರ ಭಾಗದಲ್ಲಿರುವ ಯತ್ನಾಳ ಅವರ ತೋಟದ ಮನೆಯಲ್ಲಿ ಇಬ್ಬರು ನಾಯಕರು, ಪ್ರಸಕ್ತ ರಾಜಕೀಯ ಬೆಳವಣಿಗೆ, ವಿಧಾನ ಪರಿಷತ್‌ ಚುನಾವಣೆ, ಸಚಿವ ಸ್ಥಾನ ಬೇಡಿಕೆ, ಬಿಟ್ ಕಾಯಿನ್ ಪ್ರಕರಣ, ಪಕ್ಷ ಸಂಘಟನೆ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ನೆರೆಯ ಮಹಾರಾಷ್ಟ್ರದ ಸಾಂಗ್ಲಿಯಿಂದ ನೇರವಾಗಿ ಯತ್ನಾಳ ಅವರ ತೋಟದ ಮನೆಗೆ ಆಗಮಿಸಿದ ರಮೇಶ ಜಾರಕಿಹೊಳಿ, ಮಾತುಕತೆ ಬಳಿಕ ಬೆಳಗಾವಿಗೆ ತೆರಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು