ಸಿಂದಗಿ: ‘ಸಾಂಸ್ಕೃತಿಕ ನಾಯಕ ಬಸವಣ್ಣನವರ 892ನೇ ಜಯಂತ್ಯುತ್ಸವವನ್ನು ಏ.30 ರಂದು ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅದ್ದೂರಿ ಮೆರವಣಿಗೆ ಈ ವರ್ಷದ ಜಯಂತಿಯ ವಿಶೇಷವಾಗಿದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಬಸವಮಂಟಪದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲು ಮಾತನಾಡಿದ ಅವರು, ‘ಬಸವೇಶ್ವರ ವೃತ್ತದಲ್ಲಿ ಬೆಳಿಗ್ಗೆ ಸಾರಂಗಮಠದ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಷಟಸ್ಥಲ ಧ್ವಜಾರೋಹಣ ನೆರವೇರಿಸುವರು. ಅಲ್ಲಿಂದ ಪ್ರಾರಂಭಗೊಳ್ಳುವ ಬಸವೇಶ್ವರ ಚಿತ್ರದ ಭವ್ಯ ಮೆರವಣಿಗೆ ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪುಸುಲ್ತಾನ ವೃತ್ತ, ಬಸ್ ನಿಲ್ದಾಣ ರಸ್ತೆ, ಅಂಬೇಡ್ಕರ್ ವೃತ್ತ, ಅಂಬಿಗರ ಚೌಡಯ್ಯ ವೃತ್ತದಿಂದ ನೇರವಾಗಿ ಬಸವ ಮಂಟಪ ತಲುಪುವುದು’ ಎಂದು ವಿವರಿಸಿದರು.

‘ಮೆರವಣಿಗೆಯಲ್ಲಿ ಡಿಜೆ ಸೌಂಡ್ ಸಿಸ್ಟಮ್ನಲ್ಲಿ ಬಸವಾದಿ ಶರಣರ ವಚನ ಗಾಯನ ನಡೆಯಲಿದೆ. ನಾಡಿನ ಹೆಸರಾಂತ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಈಗಾಗಲೇ ಬಸವ ಮಂಟಪದಲ್ಲಿ ಮಾತಾ ವಚನಶ್ರೀ ಅವರಿಂದ ಬಸವತತ್ವ ಪ್ರವಚನ ಕಾರ್ಯಕ್ರಮ ಪ್ರಾರಂಭಗೊಂಡಿದ್ದು, ಏ.30 ರವರೆಗೆ ಮುಂದುವರಿಯಲಿದೆ. ಪ್ರಸಾದ ವ್ಯವಸ್ಥೆ ಮಾಡಲಾಗಿದೆ ’ ಎಂದು ತಿಳಿಸಿದರು.

ರಾಷ್ಟ್ರೀಯ ಬಸವ ದಳದ ಪ್ರಮುಖ ಶಿವಾನಂದ ಕಲಬುರ್ಗಿ ಮಾತನಾಡಿ, ‘ಸಂಜೆ ಬಸವ ಮಂಟಪದ ಆವರಣದಲ್ಲಿ ಬಸವೇಶ್ವರ ಜಯಂತ್ಯುತ್ಸವದ ಬಹಿರಂಗ ಸಭೆ ನಡೆಯಲಿದೆ. ವಿಶ್ರಾಂತ ಪ್ರಾಧ್ಯಾಪಕ ಬಿ.ಎನ್.ಪಾಟೀಲ ಇಬ್ರಾಹಿಂಪುರ ವಿಶೇಷ ಉಪನ್ಯಾಸ ನೀಡುವರು’ ಎಂದರು.

‘ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಸಮಾರಂಭವನ್ನು ಉದ್ಘಾಟಿಸುವರು. ಮಾಜಿ ಶಾಸಕರಾದ ರಮೇಶ ಭೂಸನೂರ, ಶರಣಪ್ಪ ಸುಣಗಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ರಾಷ್ಟ್ರೀಯ ಬಸವದಳದ ಅಧ್ಯಕ್ಷ ಮಲ್ಲಿಕಾರ್ಜುನ ಅರ್ಜುಣಗಿ ಅಧ್ಯಕ್ಷತೆ ವಹಿಸಿಕೊಳ್ಳುವರು’ ಎಂದು ತಿಳಿಸಿದರು.

ಪ್ರಥಮ ದರ್ಜೆ ಗುತ್ತಿಗೆದಾರ ಮುತ್ತು ಮುಂಡೇವಾಡಗಿ, ಸಾಯಬಣ್ಣ ಪುರದಾಳ, ಅಂಬರೀಶ ಚೌಗಲೆ, ಶಿವಾನಂದ ಹಡಪದ, ವಿಶ್ವನಾಥ ಜೋಗೂರ, ಸುರೇಶ ಪೂಜಾರಿ, ಸತೀಶ ಬಿರಾದಾರ, ಗುರುಪಾದ ತಾರಾಪೂರ, ಸುನಂದಾ ಯಂಪುರೆ, ಶೈಲಜಾ ಸ್ಥಾವರಮಠ, ಚಂದ್ರಶೇಖರ ದೇವರಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.