ಬಸವನಬಾಗೇವಾಡಿ: ಇತ್ತೀಚೆಗೆ ಭಾಲ್ಕಿ ಉಪ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಬಸವನಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಅವರನ್ನು ಬಸವನಬಾಗೇವಾಡಿ ಪೊಲೀಸ್ ಉಪವಿಭಾಗದಿಂದ ಬುಧವಾರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.

ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ‘ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಅವರು ದಕ್ಷತೆ, ಕಾರ್ಯಕ್ಷಮತೆ, ಜನಪರ ಸೇವೆ ಮೂಲಕ ಬಸವನಾಡಿನ ಜನರ ಪ್ರೀತಿ, ವಿಶ್ವಾಸ ಗಳಿಸಿರುವ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿದ್ದಾರೆ. ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಿ ಮತ್ತೆ ವಿಜಯಪುರ ಜಿಲ್ಲೆಗೆ ಅವರ ಸೇವೆ ಸಿಗುವಂತಾಗಲಿ’ ಎಂದು ಹಾರೈಸಿದರು.

ತಹಶೀಲ್ದಾರ್ ವೈ.ಎಸ್. ಸೋಮನಕಟ್ಟಿ ಮಾತನಾಡಿದರು. ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, ‘ಸರ್ಕಾರಿ ನೌಕರರಿಗೆ ವಿಜಯಪುರ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗುವುದೇ ಸೌಭಾಗ್ಯ. ಬಸವನಾಡಿನ ಜನರಿಗೆ ಅಣ್ಣ ಬಸವಣ್ಣನವರ ಗುಣಗಳು ಹಾಸು ಹೊಕ್ಕಾಗಿವೆ. ಇಡೀ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾದ ಮನಗೂಳಿ ಬ್ಯಾಂಕ್ ಕಳ್ಳತನ, ಮುದ್ದೇಬಿಹಾಳದಲ್ಲಿ ನ್ಯಾಯಾಧೀಶರ ಮನೆಕಳ್ಳತನ ದಂತಹ ದೊಡ್ಡ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಲು ಇಲ್ಲಿನ ಜನರ ಸಹಕಾರ, ಬೆಂಬಲವೇ ಕಾರಣ’ ಎಂದರು.

ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಬಸವನಬಾಗೇವಾಡಿ ಪಿಐ ಗುರುಶಾಂತ ದಾಶ್ಯಾಳ, ಹಿರಿಯರಾದ ಮಹಾಂತೇಶ ಆದಿಗೊಂಡ, ನೀಲು ನಾಯಕ್ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-26-788684871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.