ಬಸವನಬಾಗೇವಾಡಿ: ಪಟ್ಟಣದ ವ್ಯಾಪಾರಸ್ಥರಾದ ಅಗರವಾಲ ಪರಿವಾರದವರು ಕಟ್ಟಡ ಪರವಾನಗಿ ಪಡೆಯದೇ ಪುರಸಭೆ ವ್ಯಾಪ್ತಿಯಲ್ಲಿ ನಿಯಮಬಾಹಿರವಾಗಿ ಹಲವು ವಾಣಿಜ್ಯ ಮಳಿಗೆ ಹಾಗೂ ಕಟ್ಟಡಗಳನ್ನು ನಿರ್ಮಿಸಿದ್ದಾರೆಂದು ಆರೋಪಿಸಿ ಬುಧವಾರ ಕರವೇ ಕಾರ್ಯಕರ್ತರು ಪ್ರಭಾರ ತಹಶೀಲ್ದಾರ್ ಎ.ಡಿ. ಅಮರಾವದಗಿ ಅವರಿಗೆ ಮನವಿ ಸಲ್ಲಿಸಿದರು.

ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿ, ಲೋಕನಾಥ ನೇಮಿಚಂದ ಅಗರವಾಲ ಅವರು ರಾಜ್ಯ ಬಿಜ್ಜಳ ಹೆದ್ದಾರಿ ಮೇಲಿನ ಬಸ್ ನಿಲ್ದಾಣದ ಬಳಿ ಪುರಸಭೆಯಿಂದ ಪರವಾನಗಿ ಪಡೆಯದೇ ಐದು ಅಂತಸ್ತಿನ ವಾಣಿಜ್ಯ ಕಟ್ಟಡ ನಿರ್ಮಿಸಿದ್ದಾರೆ. ಅಲ್ಲದೇ ಅಂಗಡಿ ಮುಂದೆಯೇ ಅವೈಜ್ಞಾನಿಕವಾಗಿ ವಿದ್ಯುತ್ ಪರಿವರ್ತಕ ಅಳವಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ವಂಚನೆ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮುಖಂಡರಾದ ದಯಾನಂದ ಸಾರವಾಡ, ಸೀತಾರಾಮ ಭಜಂತ್ರಿ, ಹಣಮಂತ ಟಕ್ಕಳಕಿ, ರವಿ ವಡ್ಡರ, ಸುರೇಶ ಬೇವಿನಗಿಡದ, ರಾಜು ವಡ್ಡರ, ಗಣೇಶ ಗಾಯಕವಾಡ, ರಾಜು ದಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-26-1823920590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.