ಬಸವನಬಾಗೇವಾಡಿ: ಬಸವಾದಿ ಶರಣರ ತತ್ವಾದರ್ಶಗಳ ಪ್ರಖರ ಪ್ರಚಾರಕರು, ದಾಸೋಹಮೂರ್ತಿ, ಇಂಗಳೇಶ್ವರ ವಚನಶಿಲಾ ಮಂಟಪದ ಕರ್ತೃ, ಹಿರಿಯ ಸಂತ ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ(94) ಅಂತ್ಯಕ್ರಿಯೆಯು ಶುಕ್ರವಾರ ಶ್ರೀಮಠದ ಆವರಣದಲ್ಲಿ ಲಿಂಗಾಯತ ಸಂಪ್ರದಾಯದಂತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಗುರುವಾರ ಬೆಳಿಗ್ಗೆ ಶ್ರೀಮಠದಲ್ಲಿ ಲಿಂಗೈಕ್ಯರಾಗಿ, ತಮ್ಮ ಅಪಾರ ಭಕ್ತರನ್ನು ಶೋಕಸಾಗರದಲ್ಲಿ ಮುಳುಗಿಸಿದ ಶ್ರೀಗಳ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಗಿನವರೆಗೂ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಇಂಗಳೇಶ್ವರ ಗ್ರಾಮದಲ್ಲಿ ಶ್ರೀಗಳ ಅಂತಿಮ ಮೆರವಣಿಗೆ ನಡೆಯಿತು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ರಂಗೋಲಿ ಹಾಗೂ ಪುಷ್ಪಾಲಂಕಾರ ಮಾಡಿ ಭಕ್ತರು ಭಾವುಕವಾಗಿ ಶಿರಬಾಗಿ ಕೈಮುಗಿದು ಕಂಬನಿ ಮಿಡಿದರು.

ವಿರಕ್ತಮಠದ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ, ಶ್ರೀಗಳಿಗೆ ಸರ್ಕಾರಿ ಗೌರವ ಸಮರ್ಪಿಸಲಾಯಿತು. ಸರ್ಕಾರದ ಪರವಾಗಿ ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಹಾಗೂ ಜಿಲ್ಲಾಧಿಕಾರಿ ಕೆ.ಆನಂದ, ಜಿ.ಪಂ ಸಿಇಓ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಅಗಲಿದ ಶ್ರೀಗಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ವಚನಶಿಲಾ ಮಂಟಪದಲ್ಲಿ ಲಿಂಗಾಯತ ಸಂಪ್ರದಾಯದ ವಿಧಿವಿಧಾನಗಳಂತೆ ಚನ್ನಬಸವ ಶ್ರೀಗಳ ಕ್ರಿಯಾ ಸಮಾಧಿ ನೆರವೇರಿತು.

ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು ಹಾಗೂ ಧಾರವಾಡ ಮುರಘಾಮಠದ ಮಲ್ಲಿಕಾರ್ಜುನ ಶ್ರೀಗಳು, ನಿಡಸೋಸಿ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಶ್ರೀಗಳು, ಶಾಸಕ ಸಿ.ಎಸ್.ನಾಡಗೌಡ, ರಾಜುಗೌಡ ಪಾಟೀಲ, ಬಸವನ ಬಾಗೇವಾಡಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ಬಸವಜಯ ಮೃತ್ಯುಂಜಯ ಸ್ವಾಮೀಜಿ, ಇಂಗಳೇಶ್ವರ ವಿರಕ್ತಮಠದ ಸಿದ್ಧಲಿಂಗ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಶ್ರೀಗಳು, ಯರನಾಳ ಗುರುಸಂಗನಬಸವ ಶ್ರೀಗಳು, ರಾಜ್ಯ ಸಹಕಾರಿ ಮಹಾಮಂಡಲ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಸೇರಿದಂತೆ ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಅನೇಕ ಮಠಾಧೀಶರು, ಅಪಾರ ಭಕ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.