ಬಸವನಬಾಗೇವಾಡಿ: ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ಪಂಚಮಸಾಲಿ ಸಮುದಾಯದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹಕ್ಕೊತ್ತಾಯ ಮಂಡಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ‘ಶಿವಾನಂದ ಪಾಟೀಲ ಅವರು ಸತತ 6 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ ಕಳಂಕರಹಿತ ಜನಪರ ಆಡಳಿತ ನಡೆಸಿ ಜನಪ್ರಿಯತೆ ಗಳಿಸಿದ್ದಾರೆ. ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ಸಮಾಜದ ಮುಂಚೂಣಿ ಮುಖಂಡರಾಗಿರುವ ಅವರಿಗೆ ಸಚಿವ ಸ್ಥಾನದ ಜೊತೆಗೆ ಡಿಸಿಎಂ ಹುದ್ದೆ ನೀಡಬೇಕು. ಇದರಿಂದ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಆನೆಬಲ ಬರಲಿದ್ದು, ಪಕ್ಷದ ಸಂಘಟನೆಗೆ ದೊಡ್ಡ ಅನುಕೂಲವಾಗಲಿದೆ’ ಎಂದು ಆಗ್ರಹಿಸಿದರು.

ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹಾಗೂ ಪಕ್ಷದ ಪ್ರಮುಖ ಮುಖಂಡರಾದ ಶಂಕರಗೌಡ ಬಿರಾದಾರ, ಚಂದ್ರಶೇಖರಗೌಡ ಪಾಟೀಲ, ಮಹಾಂತೇಶ ಸಾಸಾಬಾಳ, ಜಗದೇವಿ ಗುಂಡಳ್ಳಿ, ರುಕ್ಷ್ಮಿಣಿ ರಾಠೋಡ, ಸಂತೋಷ ಗಣಾಚಾರಿ, ಸುರೇಶ ಗೌಡ ಪಾಟೀಲ, ಎಂ. ಜಿ. ಆದಿಗೊಂಡ, ಯಲ್ಲಪ್ಪ ಮನಗೂಳಿ ಮಾತನಾಡಿದರು.

ಕಾಂಗ್ರೆಸ್ ಮುಖಂಡರಾದ ಬಾಲಚಂದ್ರ ಮುಂಜಾನಿ, ಬಸವರಾಜ ರಾಯಗೊಂಡ, ಭರತ ಅಗರವಾಲ, ಶಬ್ಬೀರ ನದಾಫ್, ಶೇಖನಗೌಡ ಪಾಟೀಲ, ನಿಸಾರ ಚೌಧರಿ, ಬಸವರಾಜ ಸೋಮಪುರ, ರಮಜಾನ ಹೆಬ್ಬಾಳ, ವಿಶ್ವನಾಥ ಗೌಡ ಪಾಟೀಲ, ಬಸಣ್ಣ ದೇಸಾಯಿ, ಬಸವರಾಜ ಗೊಳಸಂಗಿ, ಬಸವರಾಜ ಹಾರಿವಾಳ, ಕಮಲಸಾಬ ಕೊರಬು, ಅಜೀಜ, ರವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-26-721240719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.