ಶನಿವಾರ, ಸೆಪ್ಟೆಂಬರ್ 18, 2021
28 °C

ಬಸವನ ಬಾಗೇವಾಡಿ ಪುರಸಭೆ ಉಪಚುನಾವಣೆ: ಪಕ್ಷೇತರ ಅಭ್ಯರ್ಥಿ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಬಸವನಬಾಗೇವಾಡಿ ಪುರಸಭೆಯ 21ನೇ ವಾರ್ಡ್ ನ ಕಾಂಗ್ರೆಸ್ ಸದಸ್ಯ ರಾಜು ಭೂತನಾಳ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಜರುಗಿದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ವಿಜಯಕುಮಾರ ನಾಯಕ ಅವರು 137 ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ.

ಪುರಸಭೆಯ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶರಣಪ್ಪ ಶಿರೆಪ್ಪ ಹಳ್ಳಿ ಸ್ಪರ್ಧಿಸಿದ್ದರು.  ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ನಡುವೆ ನೇರ ಹಣಾ ಹಣಿ ಏರ್ಪಟ್ಟಿತ್ತು.  ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ, ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಿತ್ತು. 

ವಿಜೇತ ಅಭ್ಯರ್ಥಿ ವಿಜಯಕುಮಾರ ನಾಯಕ 495 ಮತಗಳನ್ನು ಪಡೆದುಕೊಂಡರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಶರಣೆಪ್ಪ ಶಿರೆಪ್ಪ ಹಳ್ಳಿ ಅವರು 358 ಮತಗಳನ್ನು ಪಡೆದುಕೊಂಡಿದ್ದಾರೆ. 

ಪಕ್ಷೇತರ ಅಭ್ಯರ್ಥಿ ವಿಜಯಕುಮಾರ ನಾಯಕ ಅವರು ಗೆಲುವು ಸಾಧಿಸುತ್ತಿದ್ದಂತೆ ಬೆಂಬಲಿಗರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಗುಲಾಲು ಎರಚಿ ಸಂಭ್ರಮಿಸಿದರು.

ಪುರಸಭೆ ಸದಸ್ಯರಾದ ನೀಲಪ್ಪ ನಾಯಕ, ರವಿ ಪಟ್ಟಣಶೆಟ್ಟಿ, ಪ್ರವೀಣ ಪವಾರ, ಅಶೋಕ ಗುಳೇದ, ಜಿ.ಪಂ.ಮಾಜಿ ಸದಸ್ಯ ಸಂತೋಷ ನಾಯಕ, ಮುಖಂಡರಾದ ಜಗದೀಶ ಕೊಟ್ರಶೆಟ್ಟಿ, ಸಂಗನಗೌಡ ಚಿಕ್ಕೊಂಡ, ಗೋಪಾಲ ಚಿಂಚೋಳಿ, ಅಬ್ದುಲ್ ರೆಹಮಾನ್ ಕೊರಬು, ಬಸವರಾಜ ಬಿಜಾಪುರ, ಶ್ರೀಕಾಂತ ನಾಯಕ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು