ಬಸವನಬಾಗೇವಾಡಿ: ‘ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್, ಡೀಸೆಲ್ ಹಾಗೂ ವಾಣಿಜ್ಯ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗುತ್ತಿದೆ. ಸಾರ್ವಜನಿಕರು, ರೈತರು ಹಾಗೂ ಬಡ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪಟ್ಟಣದ ಪೆಟ್ರೋಲ್ ಬಂಕ್ಗಳಲ್ಲಿ ಸಕಾಲಕ್ಕೆ ಇಂಧನ ಸಿಗದೆ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಡೀಸೆಲ್ ನಂಬಿಕೊಂಡಿರುವ ರೈತರು ಪರದಾಡುವಂತಾಗಿದೆ. ಇನ್ನೊಂದೆಡೆ, ಪಟ್ಟಣದ ಗ್ಯಾಸ್ ಏಜೆನ್ಸಿಗಳು ಹೋಟೆಲ್, ಕ್ಯಾಂಟೀನ್ ನಡೆಸುವ ಸಣ್ಣ ಮತ್ತು ಬಡ ವ್ಯಾಪಾರಸ್ಥರಿಗೆ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ಗಳನ್ನು ವಿತರಿಸುತ್ತಿಲ್ಲ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

‘ತಹಶೀಲ್ದಾರರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಪಟ್ಟಣದ ಎಲ್ಲ ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಏಜೆನ್ಸಿಗಳ ದಾಸ್ತಾನು ಪರಿಶೀಲಿಸಬೇಕು. ಇಲ್ಲದಿದ್ದರೆ ಬಡ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಪರವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-991278455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.