ಬಸವನಬಾಗೇವಾಡಿ: ಕಳೆದ 3 ವರ್ಷಗಳಿಂದ ನಡೆಯುತ್ತಿರುವ ಜಲಧಾರೆ ಕಾಮಗಾರಿ ಹೆಚ್ಚುವರಿ ಒಂದು ವರ್ಷ ಅವಧಿ ಮುಗಿದರೂ ಕಾಮಗಾರಿ ಅಪೂರ್ಣಗೊಂಡಿರುವುದಕ್ಕೆ ಸಚಿವ ಶಿವಾನಂದ ಪಾಟೀಲ ಅವರು ಎರಡು ತಿಂಗಳಲ್ಲಿ ಜಲಧಾರೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆ ಕಂಪನಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳ ಕುರಿತು ಪಟ್ಟಣದ ಪುರಸಭೆ ಸಭಾಭವನದಲ್ಲಿ ಸೋಮವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಲಧಾರೆ ಕಾಮಗಾರಿ ಅವಧಿ ಮೀರಿ ಹೆಚ್ಚುವರಿ ಒಂದು ವರ್ಷವಾದರೂ ಅಪೂರ್ಣಗೊಂಡಿದ್ದಕ್ಕೆ ಆಕ್ರೋಶಗೊಂಡ ಸಚಿವರು, ಗುತ್ತಿಗೆ ಕಂಪನಿಯ ಯೋಜನಾ ಎಂಜಿನಿಯರ್ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈಗಾಗಲೇ ಸಾವಿರ ಕೋಟಿ ಖರ್ಚು ಮಾಡಿದರೂ ಮೂಲವಾಗಿ ಮಹತ್ವದ ಜಾಕ್ವೆಲ್ ಹಾಗೂ ಇನ್ಟೇಕ್ ಚಾನಲ್ ಕಾಮಗಾರಿಯೇ ಪೂರ್ಣವಾಗಿಲ್ಲ. ಡಿಸಿ, ಜಿ.ಪಂ ಸಿಇಒ ಹಾಗೂ ಯೋಜನಾ ಎಂಜಿನಿಯರ್ ಕೂಡಲೇ ಸಭೆ ಮಾಡಿ ತೊಂದರೆಗಳನ್ನು ಸರಿಪಡಿಸಿಕೊಳ್ಳಬೇಕು. ಇನ್ನೆರಡು ತಿಂಗಳಲ್ಲಿ ಜಲಧಾರೆ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಶುದ್ಧೀಕರಿಸಿದ ನೀರನ್ನೇ ಒದಗಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಲ್ಲದೇ ಮತಕ್ಷೇತ್ರದ ಬೃಹತ್ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ನಿಗಾ ವಹಿಸಲು ಮತ್ತು ವಿದ್ಯುತ್ ಸಂಪರ್ಕ ಕಡಿತಗಳಾಗದಂತೆ ತಕ್ಷಣವೇ ದುರಸ್ತಿ ಮಾಡಲು ಹೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು. ಗ್ರಾಮೀಣ ಭಾಗದಲ್ಲಿ ರೈತರಿಗೆ ತೊಂದರೆ ನೀಡುತ್ತಿರುವ ಸುಟ್ಟು ಹೋದ ವಿದ್ಯುತ್ ಪರಿವರ್ತಕಗಳನ್ನು ಸಕಾಲದಲ್ಲಿ ಮತ್ತು ಯುದ್ಧೋಪಾದಿಯಲ್ಲಿ ಬದಲಾಯಿಸಿ ಕೊಡುವಂತೆ ಸಚಿವರು ಕಟ್ಟುನಿಟ್ಟಿನ ಆದೇಶ ನೀಡಿದರು. ಮತಕ್ಷೇತ್ರದ ಪ್ರತಿಯೊಂದು ಮನೆಗೂ ಸಮರ್ಪಕವಾಗಿ ಕುಡಿಯುವ ನೀರು ತಲುಪಿಸುವ ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಸಚಿವರು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮತಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಆನಂದ ಕೆ., ಜಿ.ಪಂ ಸಿಇಒ ರಿಷಿ ಆನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ, ವಿಜಯಪುರ ಎಸಿ ಗುರುನಾಥ ದಡ್ಡೆ, ಬಸವನಬಾಗೇವಾಡಿ ತಹಶೀಲ್ದಾರ ವೈ.ಎಸ್. ಸೋಮನಕಟ್ಟಿ, ಕೊಲ್ಹಾರ ತಹಶೀಲ್ದಾರ ಸಂತೋಷ ಮ್ಯಾಗೇರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಸುನಿಲ್ ಮದ್ದಿನ ಸೇರಿದಂತೆ ತಾಲ್ಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-672450749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.