ಬಸವನಬಾಗೇವಾಡಿ: ಸನ್ಯಾಸಿಗಳಿಗಷ್ಟೇ ಅಲ್ಲ. ಪ್ರತಿ ಮನುಷ್ಯನಿಗೂ ತಪಸ್ಸು ಮಾಡುವ ಶಕ್ತಿ ಇರುತ್ತದೆ. ಗುರುದೀಕ್ಷೆ ಪಡೆದು ಗುರು ಮಾರ್ಗದಲ್ಲಿ ಸಾಗಿದರೆ ಸಾಧನೆ ಎಂಬ ಶಿಖರವೇರಲು ಸಾಧ್ಯ ಎಂದು ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಹಿರೇಮಠದ ಲಿಂ. ಬಸವ ಶಿವಾಚಾರ್ಯ ಸ್ವಾಮೀಜಿ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅಡ್ಡಪಲ್ಲಕ್ಕಿ ಉತ್ಸವ, ಶರಣಬಸವೇಶ್ವರ ಪುರಾಣ ಮಹಾಮಂಗಳೋತ್ಸವ ಹಾಗೂ ಧರ್ಮಸಭೆಯಲ್ಲಿ ಮಾತನಾಡಿದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಮಾತನಾಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಾಶಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಿತು.

ಕೆರೂರ ಚರಂತಿಮಠದ ಶಿವಕುಮಾರ ಶಿವಾಚಾರ್ಯರು, ಬೆಂಗಳೂರು ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯರು ಮಾತನಾಡಿದರು. ಕೊಟ್ಟೂರು-ಡೋಣೂರು ಹಿರೇಮಠದ ಸಿದ್ಥಲಿಂಗ ಶಿವಾಚಾರ್ಯರು, ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯರು, ಕರಭಂಟನಾಳದ ಶಿವಕುಮಾರ ಶ್ರೀಗಳು, ಜಿ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಗುರಪ್ಪ ಬೆವೂರ, ವೀರಣ್ಣ ಸಜ್ಜನ, ಸಂಗನಬಸು ಬಾಗೇವಾಡಿ, ಕೈಲಾಸ ಬಾಗೇವಾಡಿ ,ಜಗದೀಶ ಬೇವೂರ, ಶ್ರೀಶೈಲ ಚಾಂದಕವಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-26-918681120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.