ಬಸವನಬಾಗೇವಾಡಿ: ಬಸವನಬಾಗೇವಾಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬಸವನಬಾಗೇವಾಡಿ, ನಿಡಗುಂದಿ ಹಾಗೂ ಕೊಲ್ಹಾರ ಹೀಗೆ ಮೂರು ತಾಲ್ಲೂಕುಗಳನ್ನು ಹೊಂದಿದ್ದರೂ ಒಂದೂ ಸುಸಜ್ಜಿತ ತಾಲ್ಲೂಕು ಕ್ರೀಡಾಂಗಣವಿಲ್ಲದೇ ಈ ಭಾಗದ ಕ್ರೀಡಾಪಟುಗಳಿಗೆ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ರೀಡಾಕೂಟಗಳ ಆಯೋಜನೆ, ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಸಮಾರಂಭಗಳು, ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಶಾಲಾ ಕಾಲೇಜುಗಳ ಮೈದಾನಗಳೇ ಅನಿವಾರ್ಯವಾಗಿವೆ.

ವಿಜಯಪುರ ಜಿಲ್ಲೆಯ ಹಳೆಯ ತಾಲ್ಲೂಕುಗಳ ಪೈಕಿ ಅಖಂಡ ಬಸವನಬಾಗೇವಾಡಿ ತಾಲ್ಲೂಕು ಹೊರತುಪಡಿಸಿ ಉಳಿದ ಇಂಡಿ, ಸಿಂದಗಿ, ಮುದ್ದೇಬಿಹಾಳ ತಾಲ್ಲೂಕುಗಳು ಸುಸಜ್ಜಿತ ತಾಲ್ಲೂಕು ಕ್ರೀಡಾಂಗಣಗಳನ್ನು ಹೊಂದಿವೆ. ಆದರೆ, ಬಸವನಬಾಗೇವಾಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ದಶಕದ ಹಿಂದೆ ರಚನೆಯಾದ ನಿಡಗುಂದಿ, ಕೊಲ್ಹಾರ ಹೊಸ ಎರಡು ತಾಲ್ಲೂಕುಗಳು ಸೇರಿ ಮೂರು ತಾಲ್ಲೂಕುಗಳಿದ್ದರೂ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಯಾವುದೇ ತಾಲ್ಲೂಕಿನಲ್ಲೂ ಸುಸಜ್ಜಿತ ತಾಲ್ಲೂಕು ಕ್ರೀಡಾಂಗಣ ಇಲ್ಲದಿರುವುದು ಈ ಭಾಗದ ಕ್ರೀಡಾಪಟುಗಳು, ಕ್ರೀಡಾಸಕ್ತರು, ವಿದ್ಯಾರ್ಥಿಗಳು, ಸಾರ್ವಜನಿಕರಲ್ಲಿ ತೀವ್ರ ನಿರಾಸೆ ಮೂಡಿಸಿದೆ.

‘ಬಸವನಬಾಗೇವಾಡಿ ಮತಕ್ಷೇತ್ರ ಪ್ರತಿನಿಧಿಸುವ ಸಚಿವ ಶಿವಾನಂದ ಪಾಟೀಲರ ಪ್ರಯತ್ನದಿಂದ ಸದ್ಯ ಬಸವನಬಾಗೇವಾಡಿ ತಾಲ್ಲೂಕಿನ ಟಕ್ಕಳಕ್ಕಿ ಸಮೀಪದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ 6 ಎಕರೆ ನಿವೇಶನ ಹಾಗೂ ನಿಡಗುಂದಿ ತಾಲ್ಲೂಕಿನ ದೇವಲಾಪೂರ ಬಳಿ 6 ಎಕರೆ 20 ಗುಂಟೆ ಜಾಗವನ್ನು ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣಕ್ಕೆ ಈಗಾಗಲೇ ಸ್ಥಳ ಗುರುತಿಸಿ ಕ್ರೀಡಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಕೊಲ್ಹಾರ ತಾಲ್ಲೂಕಿನಲ್ಲಿ ಕ್ರೀಡಾಂಗಣಕ್ಕಾಗಿ ಇನ್ನೂ ಸ್ಥಳ ಗುರುತಿಸಬೇಕಿದೆ’ ಎಂಬುದು ಕ್ರೀಡಾ ಇಲಾಖೆ ಅಧಿಕಾರಿಗಳು ‘ಪ್ರಜಾವಾಣಿ’ಗೆ ನೀಡುವ ಮಾಹಿತಿ.

2025–26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ನಿವೇಶನ ಲಭ್ಯವಿರುವ ಬಸವನಬಾಗೇವಾಡಿ ಹಾಗೂ ನಿಡಗುಂದಿ ತಾಲ್ಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ತಲಾ ₹2 ಕೋಟಿ ಅನುದಾನ ಮಂಜೂರಾಗಿದೆ. ಪ್ರಥಮ ಹಂತವಾಗಿ ತಲಾ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ.

‘ಎರಡೂ ತಾಲ್ಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಿಸಲು ಗುರುತಿಸಿರುವ ಜಾಗ ಪಟ್ಟಣದಿಂದ ದೂರದಲ್ಲಿದ್ದು, ಪಟ್ಟಣದ ಸಮೀಪದಲ್ಲೇ ಕ್ರೀಡಾಂಗಣ ನಿರ್ಮಿಸಬೇಕು’ ಎಂಬ ಕೂಗು ಸಹ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಬಸವನಬಾಗೇವಾಡಿ ನಿಡಗುಂದಿಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರಿದಂದ ತಲಾ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಾಣ ಕಾರ್ಯ ನಡೆಯಲಿದೆ
ರಾಜಶೇಖರ ದೈವಾಡಿ ಕ್ರೀಡಾಧಿಕಾರಿ ವಿಜಯಪುರ

ಕ್ರೀಡಾಂಗಣ ಇಲ್ಲದಿರುವುದು ದುರ್ದೈವ: ‘ಅಖಂಡ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಅನೇಕ ಕ್ರೀಡಾ ಸಾಧಕರಿದ್ದಾರೆ. ನಮ್ಮ ಭಾಗದಿಂದ ಪ್ರತಿವರ್ಷ 10-15 ಜನ ವಿವಿಧ ವಿಭಾಗಗಳ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುತ್ತಾರೆ. ಆದರೆ ಈ ಭಾಗದ ಕ್ರೀಡಾಪಟುಗಳಿಗೆ ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ಕ್ರೀಡಾಂಗಣ ಒಳಾಂಗಣ ಕ್ರೀಡಾಂಗಣ ಇಲ್ಲದಿರುವುದು ದುರ್ದೈವ’ ಎಂದು ವಾಲಿಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ರಾಷ್ಟ್ರಮಟ್ಟದ ಕ್ರೀಡಾಪಟು ಪ್ರವೀಣ ನಡಕಟ್ಟಿ ಹೇಳಿದರು. ‘ಈ ಬಗ್ಗೆ ಶಾಸಕರಿಗೆ ಸರ್ಕಾರಕ್ಕೆ ಹಿಂದೆ ಮೂರ್ನಾಲ್ಕು ಬಾರಿ ಮನವಿ ಸಲ್ಲಿಸಿದ್ದೇವೆ. ಕ್ಷೇತ್ರ ಪ್ರತಿನಿಧಿಸುವ ಸಚಿವ ಶಿವಾನಂದ ಪಾಟೀಲರು ಕೂಡಲೇ ಮುತುವರ್ಜಿ ವಹಿಸಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮವಹಿಸಬೇಕು. ಅಲ್ಲದೇ ಒಳಾಂಗಣ ಕ್ರೀಡಾಂಗಣ ಸಹ ಅತ್ಯವಶ್ಯವಿದ್ದು ಅದನ್ನು ಪಟ್ಟಣದ ವ್ಯಾಪ್ತಿಯಲ್ಲೇ ನಿರ್ಮಿಸುವ ಕಾರ್ಯಕ್ಕೆ ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.