ಸೋಮವಾರ, ನವೆಂಬರ್ 23, 2020
23 °C

ಭೈರಗೊಂಡ ಶೂಟ್‌ಔಟ್‌ ಪ್ರಕರಣ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕಾಂಗ್ರೆಸ್‌ ಮುಖಂಡ ಮಹಾದೇವ ಸಾಹುಕಾರ ಭೈರಗೊಂಡ ಚಲಿಸುತ್ತಿದ್ದ ಕಾರಿಗೆ ಟಿಪ್ಪರ್‌ನಿಂದ ಡಿಕ್ಕಿ ಹೊಡೆಸಿ, ಗುಂಡಿನ ದಾಳಿ ನಡೆಸಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಭೈರಗೊಂಡ ಅವರ ಕಾರಿಗೆ ಗುದ್ದಿದ ಟಿಪ್ಪರ್‌ ಚಾಲಕ ಹಾಗೂ ಮಾಹಿತಿ ನೀಡಿದ ಆರೋಪಿಯನ್ನು ಬಂಧಿಸಿರುವುದಾಗಿ ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್‌ ಗುರುವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಟಿಪ್ಪರ್ ಚಾಲಕ ಉಮರಾಣಿ ನಾಗಪ್ಪ ಪೀರಗೊಂಡ(28) ಹಾಗೂ ಭೈರಗೊಂಡ ಅವರ ಚಲನವಲನದ ಬಗ್ಗೆ  ಮಾಹಿತಿ ನೀಡುತ್ತಿದ್ದ ವಿಜಯಪುರದ ವಿಜಯ ತಾಳಿಕೋಟೆ(27) ಎಂಬುವವರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ರೌಡಿ ಗ್ಯಾಂಗ್‌ ಕಟ್ಟಿಕೊಳ್ಳಬೇಕು ಎಂಬ ಉದ್ದೇಶ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಮಡಿವಾಳ ಹಿರೇಮಠ ಸ್ವಾಮಿ ಎಂಬ ವ್ಯಕ್ತಿ ಈ ಪ್ರಕರಣದ ಕೇಂದ್ರ ಬಿಂದುವಾಗಿದ್ದಾನೆ. ಕಳೆದ ಆರೇಳು ತಿಂಗಳಿಂದ ಈ ಸಂಬಂಧ ಗ್ಯಾಂಗ್‌ ಕಟ್ಟಿಕೊಂಡಿರುವುದಾಗಿ ತಿಳಿಸಿದರು.  

ಧರ್ಮರಾಜ್ ಚಡಚಣನ ಹಳೆಯ ಸಹಚರರು ಸಹ ಈ ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ. ಕಾತ್ರಾಳ ಗ್ರಾಮದಲ್ಲಿ ನಡೆದ ಸತ್ಸಂಗ ಸಂದರ್ಭದಲ್ಲಿಯೂ ಮಹಾದೇವ ಸಾಹುಕಾರ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು. ಆದರೆ, ಕಾರ್ಯಕ್ರಮ ರದ್ದಾದ ಕಾರಣ ಸಾಧ್ಯವಾಗಲಿಲ್ಲ ಎಂದರು.

ಪ್ರಕರಣದ ಮುಖ್ಯ ಆರೋಪಿ ಮಡಿವಾಳ ಹಿರೇಮಠ ಸ್ವಾಮಿ ಬಂಧನಕ್ಕೆ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು