ಮಂಗಳವಾರ, ಮಾರ್ಚ್ 21, 2023
20 °C

ಭೀಮಾತೀರದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಿಂದಗಿ ತಾಲ್ಲೂಕಿನ ದೇವರನಾವದಗಿ ಬಳಿಯ ಜಮೀನೊಂದರಲ್ಲಿ ಚಿರತೆ ಕಳೆಬರ ಪತ್ತೆಯಾಗಿದೆ.

ಶಂಬೆವಾಡ, ಕುಮಸಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ 15 ದಿನಗಳ ಈಚೆಗೆ ದನಕರುಗಳ ಮೇಲೆ ದಾಳಿ ಮಾಡಿದ್ದ ಈ ಚಿರತೆ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿದೆ.

ಚಿರತೆ ಉಪಟಳದಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದರು. ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆ ಚಲನವಲನ ದೃಶ್ಯ ಸೆರೆಯಾಗಿತ್ತು.

ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಕಡೆ ಬೋನ್ ಇಟ್ಟಿದ್ದರು. ಆದರೆ, ಭಾನುವಾರ ರಾತ್ರಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ. 

ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು