ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವರಹಿಪ್ಪರಗಿ: ವಿವಿಧ ಕಾಮಗಾರಿಗೆ ಭೂಮಿಪೂಜೆ

Published : 28 ಸೆಪ್ಟೆಂಬರ್ 2024, 16:13 IST
Last Updated : 28 ಸೆಪ್ಟೆಂಬರ್ 2024, 16:13 IST
ಫಾಲೋ ಮಾಡಿ
Comments

ದೇವರಹಿಪ್ಪರಗಿ: ಮಕ್ಕಳು ಸಂಸ್ಕಾರವಂತರಾದಾಗ ಮಾತ್ರ ಅವರು ಕಲಿತ ಶಿಕ್ಷಣಕ್ಕೆ ಬೆಲೆಯಿದೆ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಹೇಳಿದರು.

ಪಟ್ಟಣದಲ್ಲಿ ಶನಿವಾರ 2023-24ನೇ ಸಾಲಿನ ತಾಲ್ಲೂಕು ಪಂಚಾಯಿತಿ ಅನಿರ್ಭಂಧಿತ ಅನುದಾನ ಅಡಿಯಲ್ಲಿ ಸರ್ಕಾರಿ ಉರ್ದುಶಾಲೆಯ ಶೌಚಾಲಯ ನಿರ್ಮಾಣ ಕಾಮಗಾರಿ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಹಾಗೂ ಸರ್ಕಾರಿ ಉರ್ದು ಪ್ರೌಢಶಾಲೆಯ ಕಂಪೌಂಡ ನಿರ್ಮಾಣ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ದೈಹಿಕ ಕ್ಷಮತೆ ಅಗತ್ಯವಾಗಿದೆ. ಶೈಕ್ಷಣಿಕ ಹಾಗೂ ಆರೋಗ್ಯದ ದೃಷ್ಟಿಯಿಂದ ಪಾಲಕರು ಮೊಬೈಲ್‌ಗಳಿಂದ ತಮ್ಮ ಮಕ್ಕಳನ್ನು ದೂರವಿಡಬೇಕು ಎಂದರು.

ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎ.ಎಸ್.ಡೋಣೂರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರದ ಅಕ್ಷರ ದಾಸೋಹ, ಮಧ್ಯಾನ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಷನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಸಿಂದಗಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಸ್ವಾಗತಿಸಿದರು. ನಂತರ ಮಕ್ಕಳಿಗೆ ಮೊಟ್ಟೆ ವಿತರಿಸಲಾಯಿತು.

ಜಿಲ್ಲಾ ಜಿಡಿಎಸ್ ಉಪಾಧ್ಯಕ್ಷ ರಿಯಾಜ್ ತಾಂಬೋಳಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಸ್.ಬೇವನೂರ, ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲಿಕಾರ, ಎಸ್‌ಡಿಎಂಸಿ ಅಧ್ಯಕ್ಷ ಆರೀಫ್ ಕರ್ನಾಳ, ಮುಖ್ಯಶಿಕ್ಷಕ ಎಂ.ಎ.ಹೆಬ್ಬಾಳ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ (ಜಲಕತ್ತಿ), ಶಾಂತಯ್ಯ ಜಡಿಮಠ, ಕಾಶೀನಾಥ ಜಮಾದಾರ, ಕಾಶೀನಾಥ ಬಜಂತ್ರಿ, ಸುಮಂಗಲಾ ಸೆಬೇನವರ, ಸಿಂಧೂರ ಡಾಲೇರ, ಶಿಕ್ಷಕ ನಾಗೇಶ ನಾಗೂರ, ಮಹಿಬೂಬ್ ಮಳಖೇಡ ಹಾಗೂ ಶಿಕ್ಷಕ ಸಿಬ್ಬಂದಿ, ಮಕ್ಕಳು ಇದ್ದರು.

ದೇವರಹಿಪ್ಪರಗಿ ಹೊಸನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಮೊಟ್ಟೆ ವಿತರಿಸಿದರು
ದೇವರಹಿಪ್ಪರಗಿ ಹೊಸನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಮೊಟ್ಟೆ ವಿತರಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT