ವಿಜಯಪುರ: ಮುಂದಿನ ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಸಿಂದಗಿ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈಶ್ವರಪ್ಪ ಮಾತನಾಡಿದರು.

ಈವರೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾನು ಸಿಎಂ ನಾನು ಸಿಎಂ ಎನ್ನುತ್ತಿದ್ದರು. ಒಬ್ಬರು ಎಡಕ್ಕೆ ಎಳೆದರೆ, ಇನ್ನೊಬ್ಬರು ಬಲಕ್ಕೆ ಎಳೆಯುತ್ತಾರೆ. ಇದೀಗ ಅನಿವಾರ್ಯವಾಗಿ ಒಂದಾಗಿದ್ದಾರೆ ಎಂದರು.

ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಾನಗಲ್, ಸಿಂದಗಿ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಜನ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಸಚಿವ ಗೋವಿಂದ ಕಾರಜೋಳ ಮಾತನಾಡಿ, ಆದಾಯ ತೆರಿಗೆ ಸ್ವಾಯತ್ತ ಸಂಸ್ಥೆ, ದಾಳಿಗೂ ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ. ವಿರೋಧ ಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಸಿಂದಗಿ ಕ್ಷೇತ್ರದಲ್ಲಿ ಬಹಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಸೂಚಿ ಮಾಡಿಕೊಂಡಿದ್ದೇವೆ. ಬೂತ್‌ಮಟ್ಟದಲ್ಲಿ ಮನೆ ಮನೆಗೆ ತೆರಳಿ ಕೆಲಸ ಮಾಡಲು ತಂಡಗಳು ಸಜ್ಜಾಗಿವೆ. ಏಳು ತಂಡಗಳನ್ನು ಮಾಡಲಾಗಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಎರಡು ದಿನ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

ನಾಮಪತ್ರ ಸಲ್ಲಿಕೆ: ಸಿಂದಗಿ ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ರಮೇಶ ಭೂಸನೂರ ಅವರು ಸಚಿವರಾದ ವಿ.ಸೋಮಣ್ಣ, ಶಶಿಕಲಾ ಜೊಲ್ಲೆ, ಭೈರತಿ ಬಸವರಾಜ್, ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಸೇರಿದಂತೆ ವಿವಿಧ ನಾಯಕರೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.