ಆಲಮೇಲ(ವಿಜಯಪುರ): ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಪರಿವರ್ತನೆಯ ಸಂದೇಶ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆ ಪ್ರಚಾರ ಅಂಗವಾಗಿ ಪಟ್ಟಣದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಮತ ಯಾಚಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಎರಡೂ ಕಡೆ ಬಿಜೆಪಿ ಸರ್ಕಾರವೇ ಇದೆ. ಬೀದಿ ವ್ಯಾಪಾರಿಗಳಿಗೆ, ಬಡ ಕೂಲಿ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡದ ಇಂತಹ ಸರ್ಕಾರಕ್ಕೆ ಮತ ನೀಡಬೇಡಿ. ಬಿಜೆಪಿ ಸರ್ಕಾರ ಬಡವರ ಏಳಿಗೆಗಿಂತಲೂ ಶ್ರೀಮಂತರಿಗೆ ಸಹಾಯ ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿಯ ಅಂತ್ಯ ಈ ಉಪ ಚುನಾವಣೆ ಬಳಿಕ ಆರಂಭಗೊಳ್ಳಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಬಸವನಬಗೇವಾಡಿ ಶಾಸಕ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಯಂತರಾಯಗೌಡ ಪಾಟೀಲ, ಜೇವರ್ಗಿ ಶಾಸಕ ಅಜಯ್ ಸಿಂಗ್, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ ದೇವರಮನಿ, ಎಂ.ಆರ್. ತಾಂಬೋಳಿ, ಸಾದಿಕ ಸುಂಬಡ, ಮುನ್ನಾ ತಾಂಬೋಳಿ, ಅಶೋಕ ಕೊಳಾರಿ, ಪ್ರಭು ವಾಲೀಕಾರ, ಬಸವರಾಜ ತೆಲ್ಲೂರ, ನಜೀರ ಆಲಗೂರ, ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.