ಬುಧವಾರ, ಮೇ 25, 2022
22 °C

ವಿಜಯಪುರ: ಬಿಜೆಪಿ ಜನಸ್ವರಾಜ್‌ ಸಮಾವೇಶ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ದರ್ಬಾರ್‌ ಹೈಸ್ಕೂಲ್ ಮೈದಾನದಲ್ಲಿ ನ.20ರಂದು ಮಧ್ಯಾಹ್ನ 3ಕ್ಕೆ ಜನ ಸ್ವರಾಜ್‌ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ,  ಸಚಿವರಾದ ಗೋವಿಂದ ಕಾರಜೋಳ,  ಶ್ರೀರಾಮಲು, ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಶ್ವಿನಿ ಅನಂತಕುಮಾರ,  ಸಂಸದ ರಮೇಶ ಜಿಗಣಗಿ, ಜಿಲ್ಲೆಯ ಎಲ್ಲ ಶಾಸಕರು ಸಮಾವೇಶದಲ್ಲಿ ಭಾಗಿಯಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ ಕೂಚಬಾಳ ತಿಳಿಸಿದ್ದಾರೆ.

ವೇದಿಕೆ ಸಿದ್ಧತೆ ಶುಕ್ರವಾರ ಪರಿಶೀಲಿಸಿದ ಅವರು, ಸಮಾವೇಶದಲ್ಲಿ ಮೂರು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ವೇದಿಕೆಯ ಮೇಲೆ 30 ಜನ ಮುಖಂಡರಿಗೆ  ಅವಕಾಶ ಕಲ್ಪಿಸಲಾಗಿದೆ ಎಂದರು. 

ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವವರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರು, ನಗರ ಸಭೆ, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ, ಸಾವಿರಾರು ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸಮಾವೇಶದಲ್ಲಿ  ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ಬಿಜೆಪಿ ಮುಖಂಡರಾದ ಗೂಳಪ್ಪ ಶಟಗಾರ, ಭೀಮಾಶಂಕರ ಹದನೂರ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ,  ವಿಜಯ ಜೋಶಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು