ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ

Published 4 ಮೇ 2024, 16:02 IST
Last Updated 4 ಮೇ 2024, 16:02 IST
ಅಕ್ಷರ ಗಾತ್ರ

ಕೊಲ್ಹಾರ: ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಬಿಜೆಪಿಯವರು ಸುಳ್ಳಿನ ಮೇಲೆ ಸಾಮ್ರಾಜ್ಯ ಕಟ್ಟುತ್ತಾರೆ. ಇಲ್ಲದ್ದನ್ನು ಅಚ್ಚುಕಟ್ಟಾಗಿ ಸೃಷ್ಟಿಸುತ್ತಾರೆ. ಭ್ರಮೆಗಳನ್ನು ಬಿತ್ತಿ ಮುಗ್ಧ ಜನರ ಮತ ಕೇಳುತ್ತಾರೆ. ಇದೆಲ್ಲದರಿಂದ ಬೇಸತ್ತು ತಾವು ಬಿಜೆಪಿ ತೊರೆಯಬೇಕಾಯಿತು ಎಂದು ಹೇಳಿದರು.

ಕಾಂಗ್ರೆಸ್ ಮೊದಲಿಂದ ದೇಶ ಪ್ರೇಮ ಮೆರೆಯುತ್ತಾ ಬಂದಿದೆ, ಈ ದೇಶವನ್ನು ಕಟ್ಟಿದೆ. ರಾಜ್ಯದ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿಗಳ ಮೂಲಕ ಜನಮನವನ್ನು ಗೆದ್ದಿದೆ. ಬಡವರ ನಿತ್ಯ ಜೀವನಕ್ಕೆ ಸಹಾಯವಾಗಲಿ ಎಂದು ಭಾಗ್ಯಗಳನ್ನು ಕೊಟ್ಟಿದೆ. ಕೇಂದ್ರ ಸರ್ಕಾರದ ಕೆಟ್ಟ ಆಡಳಿತದಿಂದ ಬೆಲೆ ಏರಿಕೆ, ಹಣದುಬ್ಬರ, ಜಿಎಸ್‌ಟಿ, ನೋಟ್ ಬಂದಿಯಿಂದ ಆರ್ಥಿಕ ಸ್ಥಿತಿ ಹದಗೆಟ್ಟು ಹೋಗಿತ್ತು. ಇದರಿಂದ ಸಾಮಾನ್ಯ ಜನ ತತ್ತರಿಸಿದ್ದರು. ಅವರಿಗೆಲ್ಲ ಗ್ಯಾರಂಟಿಗಳಿಂದ ಉಸಿರಾಡುವಂತಾಗಿದೆ ಎಂದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಮಾತನಾಡಿ, ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಸಂಕಷ್ಟದಲ್ಲಿದೆ, ದುರಾಡಳಿತ ಹೆಚ್ಚಿದೆ ಎಂದರು.

ಅಭ್ಯರ್ಥಿ ರಾಜು ಆಲಗೂರ ಮಾತನಾಡಿ, ಬಿಜೆಪಿ ಹುರಿಯಾಳಾದ ಜಿಗಜಿಣಗಿ ಹತಾಶರಾಗಿದ್ದಾರೆ. ಸಹನೆ ಕಳೆದುಕೊಂಡು ಏನೇನೊ ಮಾತನಾಡುತ್ತಿದ್ದಾರೆ. ಇದು ಅವರ ಸೋಲಿನ ದಿಕ್ಸೂಚಿಯಾಗಿದೆ ಎಂದು ಹೇಳಿದರು.

ಜಿ.ಪಂ. ಮಾಜಿ ಸದಸ್ಯ ಕಲ್ಲು ದೇಸಾಯಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮುಖಂಡರಾದ ಶಿವನಗೌಡ ಗುಜಗೊಂಡ, ಸಿ.ಎಸ್. ಗಿಡ್ಡಪ್ಪಗೋಳ, ಬಿ.ಯು.ಗಿಡ್ಡಪ್ಪಗೋಳ, ಎಸ್.ಬಿ. ಪತಂಗಿ, ಆರ್. ಬಿ. ಪಕಾಲಿ, ಉಸ್ಮಾನ ಪಟೇಲ್, ವಿಜಯ ಮಹಾಂತೇಶ ಗಿಡ್ಡಪ್ಪಗೋಳ, ಎಂ.ಆರ್. ಕಲಾದಗಿ, ಶ್ರೀಶೈಲ ಗೌಡರ, ಡಾ.ಮೇತ್ರಿ ಅನೇಕರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT