ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ ಕಾರಜೋಳ

ಭಾರತೀಯ ಜನತಾ ಪಾರ್ಟಿ ಎಸ್.ಸಿ. ಮೋರ್ಚಾ
Published 17 ಜನವರಿ 2024, 14:23 IST
Last Updated 17 ಜನವರಿ 2024, 14:23 IST
ಅಕ್ಷರ ಗಾತ್ರ

ವಿಜಯಪುರ: ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಉಮೇಶ ಕಾರಜೋಳ ಅವರನ್ನು ಪಕ್ಷದ ಕಾರ್ಯಕರ್ತರು ಬುಧವಾರ ಸನ್ಮಾನಿಸಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಉಮೇಶ ಕಾರಜೋಳ, ಭಾರತೀಯ ಜನತಾ ಪಕ್ಷ ನನ್ನ ಉಸಿರು, ಎಲ್ಲ ಕಾರ್ಯಕರ್ತ ಬಂಧುಗಳ ಆಶೀರ್ವಾದ, ಮುಖಂಡರ ಮಾರ್ಗದರ್ಶನ ಫಲವಾಗಿ ನನಗೆ ನೂತನ ಜವಾಬ್ದಾರಿ ದೊರಕಿದೆ, ಈ ಮಹತ್ವದ ಜವಾಬ್ದಾರಿಯನ್ನು ಎಲ್ಲರ ಮಾರ್ಗದರ್ಶನ, ಸಲಹೆ ಸೂಚನೆಗಳೊಂದಿಗೆ ಸಮರ್ಥವಾಗಿ‌ ನಿಭಾಯಿಸುವೆ ಎಂದರು.

ಪ್ರಧಾನಿ ನರೇಂದ್ರ ‌ಮೋದಿ ಅವರ ಆಡಳಿತ ಅವಧಿಯಲ್ಲಿ ಅನೇಕ ಮಹತ್ವದ ಅಭಿವೃದ್ಧಿ ಯೋಜನೆಗಳು ಕಾರ್ಯಗತಗೊಂಡಿವೆ, ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯಾಗಿಸುವ ಸಂಕಲ್ಪವನ್ನು ಪ್ರತಿ ಕಾರ್ಯಕರ್ತರು ಸ್ವೀಕರಿಸಬೇಕು. ಪಕ್ಷ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಧ್ಯೆಯವಾಗಿದೆ. ಎಲ್ಲ ವರ್ಗಗಳ ಹಿತರಕ್ಷಣೆಗೆ ಮೋದಿ ಸರ್ಕಾರ ಬದ್ಧತೆ ಪ್ರದರ್ಶಿಸಿದೆ, ನೈಜ ಕಳಕಳಿಯ ಬಿಜೆಪಿ ಪಕ್ಷ ಮತ್ತೊಮ್ಮೆ ಗೆಲುವಿನ ನಗೆ ಬೀರಲು ಶಕ್ತಿ ಮೀರಿ ಪ್ರಯತ್ನಿಸೋಣ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ವಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ಮಳುಗೌಡ ಪಾಟೀಲ, ಪ್ರಧಾನ‌ ಕಾರ್ಯದರ್ಶಿ ಮಲ್ಲಿಕಾರ್ಜುನ‌ ಜೋಗೂರ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ಶಿಲ್ಪಾ ಕುದರಗೊಂಡ, ಸಂದೀಪ ಪಾಟೀಲ,‌ ಬಸವರಾಜ ಹೂಗಾರ, ವಿಠ್ಠಲ ನಡುವಿನಕೇರಿ, ಕೃಷ್ಣಾ ಗುನ್ನಾಳಕರ, ಪ್ರಮೋದ ಬಡಿಗೇರ, ರಾಜೇಶ ತಾವಸೇ, ಶ್ರೀಧರ ಬಿಜ್ಜರಗಿ ಉಪಸ್ಥಿತರಿದ್ದರು.

ಸಮನ್ವಯ ಸಾಧಿಸಲು ಆದ್ಯತೆ: ಕೂಚಬಾಳ

ವಿಜಯಪುರ ಜಿಲ್ಲೆಯ ನಾಯಕರು ಕಾರ್ಯಕರ್ತರ ನಡುವೆ ಸಮನ್ವಯ ಸಾಧಿಸಿ ಪಕ್ಷ ಬಲವರ್ಧನೆ ಮಾಡಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪಕ್ಷದ ಗೆಲುವಿಗೆ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಆರ್.ಎಸ್.ಕೂಚಬಾಳ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ವರಿಷ್ಠರು ನನಗೆ ಮತ್ತೊಮ್ಮೆ ಜಿಲ್ಲಾ ಘಟಕದ ಅಧ್ಯಕ್ಷನನ್ನಾಗಿ ಮಾಡಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನವು ಯಾವುದೇ ಹುದ್ದೆ ಅಥವಾ ಅಧಿಕಾರ ಎಂದು ತಿಳಿಯದೇ ಜವಾಬ್ದಾರಿ ಎಂದು ತಿಳಿದು ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಆದ್ಯತೆ‌ ನೀಡಲಾಗುವುದು ಎಂದರು. ಜಿಲ್ಲೆಯಲ್ಲಿ ಎಲ್ಲವೂ ಸುಸೂತ್ರವಾಗಿದೆ ಯಾವುದೇ ಬಣ ಇಲ್ಲ ಅಭಿಪ್ರಾಯ ಬೇಧ ಇದೆ. ಅದನ್ನು ಸರಿಪಡಿಸಲಾಗುವುದು ಎಂದು ಹೇಳಿದರು. ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಲೋಕಾರ್ಪಣೆ ವೇಳೆ ಜಿಲ್ಲೆಯ ಪ್ರತಿ ಮನೆಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಬೇಕಿದೆ. ಪ್ರತಿ ಮನೆಯಲ್ಲೂ ಅಂದು ಐದೈದು ದೀಪ ಬೆಳಗಿ ಹಿಂದುಗಳ ಕನಸು ನನಸಾಗಿರುವುದಕ್ಕೆ ಸಂಭ್ರಮಿಸಬೇಕು ಎಂದರು. ಮುಖಂಡರಾದ ಶಿವರುದ್ರಪ್ಪ ಬಾಗಲಕೋಟೆ ಮಲ್ಲಿಕಾರ್ಜುನ ಜೋಗೂರ ಬಸವರಾಜ ಬಿರಾದಾರ ವಿಜಯ್ ಜೋಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT