ವಿಜಯಪುರ: ಬೆಳೆಹಾನಿ ಪರಿಹಾರ ನೀಡುವಲ್ಲಿ ವಿಳಂಬ ಸೇರಿದಂತೆ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಡಿ.4 ರಂದು ರೈತರ ಸಮ್ಮುಖದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಹಾಗೂ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.4ರಂದು ಬೆಂಗಳೂರು ಟೋಲ್ ಕೇಂದ್ರದಿಂದ ರ್ಯಾಲಿ ಆರಂಭವಾಗಿ ಗಣೇಶ ನಗರ, ಜಲನಗರ, ಶಿವಾಜಿ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಅನೇಕ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಡಾ.ಬಿ.ಆರ್. ಅಂಬೇಡ್ಕರ ವೃತ್ತಕ್ಕೆ ತಲುಪಲಿದ್ದು, ಅಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದರು.

ದೇಶದ ಬೆನ್ನೆಲುಬಾಗಿರುವ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಬೆಳೆಹಾನಿ ಪರಿಹಾರ ಹಣ ರೈತರ ಕೈ ಸೇರಿಲ್ಲ, ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನ ಇನ್ನೂ ನೀಡಿಲ್ಲ. ₹700 ಕೋಟಿ ಗಳಷ್ಟು ಪ್ರೋತ್ಸಾಹ ಧನ ರೈತರಿಗೆ ಇನ್ನೂ ದೊರಕಿಲ್ಲ ಎಂದರು.

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಸೇರಿದಂತೆ ಅನೇಕ ಹಿರಿಯ ನಾಯಕರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಎನ್ಡಿಆರ್ಎಫ್ಗಿಂತಲೂ ಅಧಿಕ ಪರಿಹಾರವನ್ನು ಈ ಹಿಂದೆ ಬಿಜೆಪಿ ನೇತೃತ್ವದ ಯಡಿಯೂರಪ್ಪ ಸರ್ಕಾರ ನೀಡಿತ್ತು. ಆದರೆ ಈ ಸರ್ಕಾರ ಈ ವಿಷಯದಲ್ಲಿ ಬೇಜವಾಬ್ದಾರಿ ತೋರಿದೆ, ಇನ್ನೊಂದೆಡೆ ರೈತ ಖರೀದಿ ಕೇಂದ್ರಗಳಲ್ಲಿ ಮೆಕ್ಕೆಜೋಳ ಮೊದಲಾದವುಗಳನ್ನು 5 ಕ್ವಿಂಟಲ್ ಖರೀದಿಗೆ ಸೀಮಿತಗೊಳಿಸಿರುವುದು ಎಷ್ಟು ಸರಿ? ಉಳಿದ ಬೆಳೆಯನ್ನು ರೈತ ಎಲ್ಲಿ ಮಾರಾಟ ಮಾಡಬೇಕು? ಎಂದು ಪ್ರಶ್ನಿಸಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಾಲರಾಜ್ ರೆಡ್ಡಿ, ಮುಖಂಡರಾದ ಮಲ್ಲು ಕಲಾದಗಿ, ಭರತ ಕುಲಕರ್ಣಿ, ವಿಜಯ ಜೋಶಿ ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.