ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂದ್ರ ಪ್ರಕರಣ: 183ಕ್ಕೆ ಏರಿಕೆ

Last Updated 18 ಜೂನ್ 2021, 16:28 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಕಪ್ಪು ಶಿಲೀಂದ್ರ(ಬ್ಲ್ಯಾಕ್‌ ಫಂಗಸ್‌) ಪ್ರಕರಣಗಳ ಸಂಖ್ಯೆ 186ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕಪ್ಪು ಶಿಲೀಂದ್ರದಿಂದ ಇಬ್ಬರು ಸಾವಿಗೀಡಾಗಿದ್ದಾರೆ. 76 ಜನ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಗುಣಮುಖವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್‌ ಗಣನೀಯ ಇಳಿಕೆ: ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಳೆದ ಒಂದು ವಾರದ ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಶೇ 5.12ಕ್ಕೆ ಕುಸಿದಿದೆ. ಜೂನ್‌ 11ರಂದು 7.72 ಇದ್ದ ಕೋವಿಡ್‌ ಪಾಸಿಟಿವಿಟಿ ಪ್ರಮಾಣವು ಜೂನ್‌ 17ರಂದು ಶೇ 2.75ಗೆ ಇಳಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT