ಗುರುವಾರ , ಮಾರ್ಚ್ 30, 2023
24 °C

ಜಲ್ಲಿ ಕಲ್ಲು ಕ್ರಷರ್‌ ಘಟಕದಲ್ಲಿ ಸ್ಫೋಟ: ಓರ್ವ ಸಾವು, ಇಬ್ಬರು ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ತಾಲ್ಲೂಕಿನ ಅಲಿಯಾಬಾದ್ ಸಮೀಪದ ಸಾವಳಗಿ ಜಲ್ಲಿ ಕಲ್ಲು ಕ್ರಷರ್ ಘಟಕದಲ್ಲಿ ಗುರುವಾರ ಸ್ಫೋಟ ಸಂಭವಿಸಿ ಒಬ್ಬ ಸಾವಿಗೀಡಾಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಜಲ್ಲಿ ಕಲ್ಲು ಕ್ರಷರ್‌ ಘಟಕದ ಸಮೀಪದ ರಸ್ತೆಯಲ್ಲಿ ನಿಂತಿದ್ದ ಮೋಹನ್ ನಾಯ್ಕ(45) ಎಂಬುವವರು ಸ್ಫೋಟದಿಂದ ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಗಿರೀಶ್ ಹಳ್ಳಿ ಹಾಗೂ ಸಚಿನ್ ಹಳ್ಳಿ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆ ಆವರಣದಲ್ಲಿ ಮೃತನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಾವಳಗಿ ಕ್ರಷರ್ ಘಟಕದಲ್ಲಿದ್ದವರು ಘಟನೆ ಬಳಿಕ ಪರಾರಿಯಾಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್‍ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು