ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುತ್ತಿರುವ ಕೋವಿಡ್‌: ಹಾಸಿಗೆಗಳ ಸಂಖ್ಯೆ ಏರಿಕೆ, ಚಿಕಿತ್ಸಾ ಶುಲ್ಕ ಇಳಿಕೆ

ಬಿ.ಎಲ್.ಡಿ.ಇ ಆಸ್ಪತ್ರೆ ಸ್ಪಂದನೆ
Last Updated 21 ಏಪ್ರಿಲ್ 2021, 13:19 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್‌ ಎರಡನೇ ಅಲೆಯಿಂದಾಗಿ ತತ್ತರಿಸಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸಲು ಹಾಸಿಗೆಗಳ ಸಂಖ್ಯೆ ಹೆಚ್ಚಿಸಿ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ತೀವ್ರ ಕಡಿತಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿರ್ಣಯವನ್ನು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ ಪ್ರಕಟಿಸಿದ್ದಾರೆ.

ಕೋವಿಡ್‌ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್‌ಗಳು ದೊರಕುತ್ತಿಲ್ಲ, ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ವ್ಯಾಪಕ ಕೂಗು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರು ಬುಧವಾರ ಬಿ.ಎಲ್.ಡಿ.ಇ ಆಸ್ಪತ್ರೆಗೆ ಭೇಟಿ ನೀಡಿ, ಹಿರಿಯ ವೈದ್ಯರ ತುರ್ತು ಸಭೆ ನಡೆಸಿದರು.

ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ 250 ಬೆಡ್‌ಗಳಿಗೆ ಮೀಸಲಾಗಿದ್ದ ಕೋವಿಡ್‌ ಹಾಸಿಗೆಗಳ ಸಂಖ್ಯೆಯನ್ನು 500ಕ್ಕೆ ವಿಸ್ತರಣೆ ಮಾಡಲಾಗಿದ್ದು, ಇದರಲ್ಲಿ ಜನರಲ್ ವಾರ್ಡ್‌ನಲ್ಲಿ 200, ಐ.ಸಿ.ಯು ನಲ್ಲಿ 50 ಮತ್ತು ಸ್ಪೆಷಲ್ ರೂಂಗಳಲ್ಲಿ 50 ಸೇರಿದಂತೆ ಒಟ್ಟು 300 ಆಕ್ಸಿಜನ್ ಬೆಡ್‌ಗಳು ಲಭ್ಯವಿದೆ. ಅಲ್ಲದೇ, 200 ಐಸೊಲೇಶನ್ ಬೆಡ್‌ಗಳು ರೋಗಿಗಳಿಗೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಅಲ್ಲದೇ, ಸರ್ಕಾರವು ಖಾಸಗಿ ಆಸ್ಪತ್ರೆಗಳಿಗೆ ನಿಗದಿಪಡಿಸಿದ ಚಿಕಿತ್ಸಾ ದರಕ್ಕಿಂತಲೂ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಶೇ 70 ಕ್ಕಿಂತ ಕಡಿಮೆ ಶುಲ್ಕವನ್ನು ಕಳೆದ ಎರಡು ತಿಂಗಳಿಂದಲೂ ಪಡೆಯಲಾಗುತ್ತಿದೆ. ಇದೀಗ ಕೋವಿಡ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದರೂ, ಬಡವರಿಗೆ, ಜನಸಾಮಾನ್ಯರಿಗೆ ಅುಕೂಲವಾಗಲಿ ಎಂಬ ಕಾರಣದಿಂದ ರಿಯಾಯಿತಿ ಶುಲ್ಕವನ್ನು ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಜನರಲ್ ವಾರ್ಡ್‌ಗಳಲ್ಲಿ ಆಕ್ಸಿಜನ್ ರಹಿತ ಬೆಡ್‌ಗೆ ₹ 10 ಸಾವಿರ ನಿಗದಿಪಡಿಸಿದ್ದರೆ ಬಿ.ಎಲ್.ಡಿ.ಇಯಲ್ಲಿ ₹3 ಸಾವಿರ, ಆಕ್ಸಿಜನ್ ಸಹಿತ ಬೆಡ್‌ಗೆ ಸರ್ಕಾರ ನಿಗದಿಪಡಿಸಿದ ₹ 12 ಸಾವಿರ ಬದಲಾಗಿ ಇಲ್ಲಿ ₹ 5 ಸಾವಿರ ಹಾಗೂ ಐ.ಸಿ.ಯುನಲ್ಲಿ ವೆಂಟಿಲೆಟರ್‌ಗೆ ₹25 ಸಾವಿರ ನಿಗದಿತ ವೆಚ್ಚದ ಬದಲಾಗಿ ₹ 8 ಸಾವಿರ ಮಾತ್ರ ಪಡೆಯಲಾಗುತ್ತಿದೆ ಎಂದರು.

ಸದ್ಯ ಆಸ್ಪತ್ರೆಯ 1100 ಹಾಸಿಗೆಗಳಲ್ಲಿ 500 ಪ್ರತ್ಯೇಕ ಹಾಸಿಗೆಗಳನ್ನು ಕೋವಿಡ್‌ ರೋಗಿಗಳಿಗೆ ಸೇವೆಯನ್ನು ಒದಗಿಸಲಾಗುತ್ತಿದ್ದು, ಸಿ.ಟಿ ಸ್ಕ್ಯಾನ್‌ ಸೇರಿದಂತೆ ಎಲ್ಲ ಹೆಚ್ಚಿನ ತಪಾಸಣೆಗಳು ಹಾಗೂ ನಿರಂತರ ವೈದ್ಯರ ಸೇವೆಯನ್ನು ಒಂದೇ ಕಡೆ ಒದಗಿಸಲಾಗಿದ್ದು, ರೆಮೆಡಿಶಿವಿರ್ ಇಂಜೆಕ್ಷನ್ ಸೇರಿದಂತೆ ಎಲ್ಲ ತುರ್ತು ಔಷಧಗಳು ಇಲ್ಲಿನ ರೋಗಿಗಳಿಗೆ ಸದಾ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಚಿಕಿತ್ಸೆ ಮುಂದುವರಿಕೆ:

ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ 1100 ಹಾಸಿಗೆಗಳಲ್ಲಿ ಕೋವಿಡ್‌ಗೆ ಕಾಯ್ದಿರಿಸಿದ 500 ಹಾಸಿಗೆಗಳನ್ನು ಹೊರತುಪಡಿಸಿ ಉಳಿದ 600 ಹಾಸಿಗೆಗಳಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಎಂದಿನಂತೆ ಮುಂದುವರೆದಿದ್ದು, ಡೆಲಿವರಿ, ಮಕ್ಕಳ ಚಿಕಿತ್ಸೆಗಳು, ಶಸ್ತ್ರ ಚಿಕಿತ್ಸೆಗಳು ಯಥಾಸ್ಥಿತಿಯಲ್ಲಿ ನಡೆದಿದ್ದು, ಸಾಮಾನ್ಯ ವಾರ್ಡ್‌ಗಳಿಗೆ ದಾಖಲಾಗುವ ಎಲ್ಲ ನಾನ್ ಕೋವಿಡ್ ರೋಗಿಗಳಿಗೆ ಹಾಸಿಗೆ ಶುಲ್ಕ, ಊಟ, ಔಷಧ, ಶಸ್ತ್ರ ಚಿಕಿತ್ಸೆಗಳು ಹಾಗೂ ಸಾಮಾನ್ಯ ತಪಾಸಣೆಗಳು ಸಂಪೂರ್ಣ ಉಚಿತವಾಗಿವೆ. ಇದು ಆಸ್ಪತ್ರೆಯ ಮಕ್ಕಳ ವಿಭಾಗದಿಂದ ಹಿಡಿದು ಎಲ್ಲ ವಿಭಾಗಗಳಲ್ಲಿ ದಾಖಲಾಗುವ ಎಲ್ಲ ಸಾಮಾನ್ಯ ವಿಭಾಗದ ರೋಗಿಗಳಿಗೆ ಅನ್ವಯಿಸುವುದು ಎಂದು ಹೇಳಿದರು.

ಉಪಕುಲಪತಿ ಡಾ.ಎಂ.ಎಸ್.ಬಿರಾದಾರ. ಸಮಕುಲಪತಿ ಡಾ.ಆರ್.ಎಸ್.ಮುಧೋಳ. ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಆಸ್ಪತ್ರೆಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಸಂಸ್ಥೆ ಪ್ರಚಾರಾಧಿಕಾರಿ ಡಾ.ಮಹಾಂತೇಶ ಬಿರಾದಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT