ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಎಸ್.ಬಿರಾದಾರ(65)ಬುಧವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು ಹಾಗೂಒಬ್ಬ ಸಹೋದರಿಇದ್ದಾರೆ.

ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ 8ಕ್ಕೆಸ್ವಗ್ರಾಮ ಉಕ್ಕಲಿಯ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಕೊರೊನಾ ರೋಗಿಗಳ ಸೇವೆ ಮಾಡುತ್ತಲೇ ಕೊರೊನಾ ಸೋಂಕಿಗೆಒಳಗಾಗಿದ್ದ ಅವರು, ವಿಜಯಪುರದ ಮನೆಯಲ್ಲಿ ಹೋಂ ಕ್ವಾರಂಟೈನ್ಆಗಿ ಗುಣಮುಖರಾಗಿದ್ದರು. ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಸೊಲ್ಲಾಪುರದಿಂದ ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗುವ ಮುನ್ನವೆ ಮಾರ್ಗ ಮಧ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತಕ್ಕೆ ಒಳಗಾದ್ದ ಅವರಿಗೆ ವೈದ್ಯರು ಹೆಚ್ಚಿನ ಚಿಕಿತ್ಸೆ ಮುಂದುವರೆದಿದ್ದರೂ ಅದು ಫಲಕಾರಿಯಾಗದೇ ನಿಧನರಾದರು.

ಮೂಲತಃ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದವರಾದ ಅವರು,ಬಳ್ಳಾರಿ ಜಿಲ್ಲೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದರು. 1984ರಿಂದ 1991ರವರೆಗೆ ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ,ಜನಾನುರಾಗಿಯಾದರು.

1991ರಿಂದ ಬಿ.ಎಂ.ಪಾಟೀಲ್ ವೈದ್ಯಕೀಯ ಕಾಲೇಜಿನಲ್ಲಿ ಅಧ್ಯಾಪಕರಾಗಿಕಾರ್ಯಆರಂಭಿಸಿದ್ದ ಅವರು 30 ವರ್ಷಗಳ ಕಾಲ ಕಾಲೇಜಿನ, ಬಿ.ಎಲ್.ಡಿ.ಇ ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ್ದಾರೆ. ವೈದ್ಯಕೀಯ ಕಾಲೇಜಿನಲ್ಲಿ ಏಳು ವರ್ಷಗಳ ಕಾಲ ಉಪಪ್ರಾಚಾರ್ಯರಾಗಿ, ನಾಲ್ಕು ವರ್ಷಗಳ ಕಾಲ ಪ್ರಾಚಾರ್ಯರಾಗಿ, ನಂತರ 2016 ರಿಂದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿಕಾರ್ಯನಿರ್ವಹಿಸುತ್ತಿದ್ದರು.

ಸಂತಾಪ: ಬಿ.ಎಲ್.ಡಿ.ಇ ಅಧ್ಯಕ್ಷರೂ ಆದ ಎಂ.ಬಿ.ಪಾಟೀಲ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ಯಶವಂತ ರಾಯಗೌಡ ಪಾಟೀಲ ಅವರುಡಾ.ಎಂ.ಎಸ್.ಬಿರಾದಾರ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.