ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರ ಏಳ್ಗೆಗಾಗಿ ಶ್ರಮಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಸುರೇಶ ಹಾರಿವಾಳ

Published 20 ಮೇ 2024, 15:20 IST
Last Updated 20 ಮೇ 2024, 15:20 IST
ಅಕ್ಷರ ಗಾತ್ರ

ಬಸವನಬಾಗೇವಾಡಿ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಬಡವರ ಶ್ರಮಿಕರ ಏಳಿಗೆಗಾಗಿ ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಘಟಕದಿಂದ ಕಾಂಗ್ರೆಸ್ ಸರ್ಕಾದ ವರ್ಷದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ,
ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಬದಲಾವಣೆಗಳಾಗಿವೆ. ಚುನಾವಣೆಗೂ ಮುಂಚೆ ನಮ್ಮ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡಿದಿದೆ ಎಂದರು.

ಕಾಂಗ್ರೆಸ್‌ನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಕಾಂಗ್ರೆಸ್ ಪಕ್ಷ ಬಡವರ ಪಕ್ಷವಾಗಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬಡವರು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ ಎಂದು ಹೇಳಿದರು.

ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ಲೋಕನಾಥ ಅಗರವಾಲ, ಮಹಾಂತೇಶ ಆದಿಗೊಂಡ, ಜಟ್ಟಿಂಗರಾಯ ಮಾಲಗಾರ, ಮತಾಬ ಬೊಮ್ಮನ್ನಳ್ಳಿ, ಬಸವರಾಜ ಹಾರಿವಾಳ, ಬಸಣ್ಣ ದೆಸಾಯಿ, ರಂಜಾನ ಹೆಬ್ಬಾಳ, ಕಮಲಸಾ ಕೊರಬು, ಶೇಖರಗೌಡ ಪಾಟೀಲ, ಸಂಕನಗೌಡ ಪಾಟೀಲ, ಸಂಗಯ್ಯ ಕಾಳಹಸ್ತೇಶ್ವರಮಠ, ಸಂಗಮೇಶ ಜಾಲಗೇರಿ, ಮುರಗೇಶ ನಾಯ್ಕೊಡಿ, ಮಹಾಂತೇಶ ಸಾಸಾಬಾಳ, ಮಲ್ಲು ಪಟ್ಟಣಶೆಟ್ಟಿ, ನಜೀರ ಗಣಿ, ರವಿ ರಾಠೋಡ, ಜಟ್ಟಿಂಗರಾಯ ಮಾಲಗಾರ, ಅಜೀಜ ಬಾಗವಾನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT