ತಾಳಿಕೋಟೆ: ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಮಡಿವಾಳಪ್ಪ ಅಮರಪ್ಪ ಬಿರಾದಾರ (ಗಡಿ ಸೋಮನಾಳ) ಅಧ್ಯಕ್ಷರಾಗಿ, ಮಾದೇವಿ ಪ್ರಭುಗೌಡ ಪಾಟೀಲ (ಗುತ್ತಿಹಾಳ) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘದ ಕಾರ್ಯಾಲಯದಲ್ಲಿ ನಡೆದ ಸದರಿ ಚುನಾವಣೆಯಲ್ಲಿ ಸಂಘದ ಆಡಳಿತ ಮಂಡಳಿಯ ಒಟ್ಟು 12 ಸದಸ್ಯರಲ್ಲಿ 9 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. 3 ಜನ ಸದಸ್ಯರು ಚುನಾವಣೆಗೆ ಗೈರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಮಡಿವಾಳಪ್ಪ ಅಮರಪ್ಪ ಬಿರಾದಾರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಾದೇವಿ ಪ್ರಭುಗೌಡ ಪಾಟೀಲ ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿದ್ದರಿಂದ ಇವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿಯೂ ಆದ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ ಘೋಷಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಹಕ ಎಸ್.ಬಿ.ಬಿರಾದಾರ ಸಹಾಯಕರಾಗಿ ಕಾರ್ಯನಿರ್ವಹಿಸಿದರು.

ವಿಜಯೋತ್ಸವ: ಆರಂಭದಿಂದಲೂ ತೀವ್ರ ಹಣಾಹಣಿಗೆ ಕಾರಣವಾದ ಈ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿರುವುದಕ್ಕೆ ಅಧ್ಯಕ್ಷ ಮಡಿವಾಳಪ್ಪ ಬಿರಾದಾರ ಹಾಗೂ ಮಾದೇವಿ ಪಾಟೀಲ ಅವರ ಬೆಂಬಲಿಗರು, ಮುಖಂಡರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಗುಲಾಲು ಎರಚಿ, ಸಿಹಿ ವಿತರಿಸಿ ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.